BJP ಅವಧಿಯಲ್ಲಿ ಅಭಿವೃದ್ಧಿಯಾಗಿದ್ದು ಮೋದಿ ಸ್ನೇಹಿತರಷ್ಟೇ: ಪ್ರಿಯಾಂಕಾ ಗಾಂಧಿ

ಲಕ್ನೋ: ಬಿಜೆಪಿ ಅವಧಿಯಲ್ಲಿ ಅಭಿವೃದ್ಧಿಯಾಗಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸ್ನೇಹಿತರಷ್ಟೇ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆಡಳಿತ ಸರ್ಕಾರದ ವಿರುದ್ಧವಾಗಿ ಕಿಡಿಕಾರಿದ್ದಾರೆ.

ಅಮೆಥಿಯಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಅಭಿವೃದ್ಧಿಯಾಗಿದ್ದು, ಮೋದಿ ಅವರ ಸ್ನೇಹಿತರಷ್ಟೇ. ಜನತೆ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಬೇಕು. ಮೋದಿ ಅವರ ಕೈಗಾರಿಕೋದ್ಯಮಿಗಳಷ್ಟೇ ಅಭಿವೃದ್ಧಿ ಹೊಂದಿದ್ದಾರೆ ಜನರು ಮಾತ್ರ ಸಂಕಷ್ಟ ಎದುರಿಸುತ್ತಿದ್ದಾರೆ ಹೀಗಾಗಿ, ಈ ಸರ್ಕಾರವನ್ನು ಬದಲಾಯಿಸುವಂತೆ ನಾನು ನಿಮ್ಮಲ್ಲಿ ವಿನಂತಿಸುತ್ತಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: 7 ವರ್ಷದಲ್ಲಿ ಅವರೇನು ಮಾಡಿದ್ದಾರೆ? – ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ದೇಶಾದ್ಯಂತ ಜನರು ಕೊರೊನಾಕ್ಕೆ ಸಿಕ್ಕಿಹಾಕಿಕೊಂಡಿದ್ದರು, ಕಾಂಗ್ರೆಸ್ ಆಡಳಿತವಿರುವ ಛತ್ತೀಸ್‍ಗಢದಿಂದ ತಮ್ಮ ಪಕ್ಷಕ್ಕೆ ಆಕ್ಸಿಜನ್ ತರುವುದಕ್ಕೆ ಬಿಡಲಿಲ್ಲ. ಕಾಂಗ್ರೆಸ್ ಸರ್ಕಾರ ಸ್ಥಾಪಿಸಿದ್ದ ಸಾರ್ವಜನಿಕ ಕ್ಷೇತ್ರದ ಸಂಸ್ಥೆಗಳನ್ನು ಪ್ರಧಾನಿ ಅವರ ದೊಡ್ಡ ದೊಡ್ಡ ಸ್ನೇಹಿತರಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಬಿಜೆಪಿ ಸರ್ಕಾರ ವಿರುದ್ಧವಾಗಿ ಆರೋಪ ಮಾಡಿದ್ದಾರೆ. ನಾಲ್ವರು ರೈತರು ಸೇರಿದಂತೆ ಎಂಟು ಜನರನ್ನು ಬಲಿತೆಗೆದುಕೊಂಡ ಲಖಿಂಪುರ ಖೇರಿ ಹಿಂಸಾಚಾರದ ಬಗ್ಗೆ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಮೃತಸಾರದ ಸ್ವರ್ಣ ಮಂದಿರ ಅಪವಿತ್ರಗೊಳಿಸಲು ಯತ್ನ – ಕೋಪ್ರೋದ್ರಿಕ್ತ ಗುಂಪಿನಿಂದ ಹತ್ಯೆ

Comments

Leave a Reply

Your email address will not be published. Required fields are marked *