ರಾಜ್ಯದಲ್ಲಿ MES ಬ್ಯಾನ್ ಆಗಬೇಕು: ನಟ ಪ್ರೇಮ್

ಹುಬ್ಬಳ್ಳಿ: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹೀಗೆ ಮುಂದುವರೆದರೆ ರಾಜ್ಯದಲ್ಲಿ ಎಂಇಎಸ್ ಸಂಘಟನೆ ಬ್ಯಾನ್ ಆಗಬೇಕು ಎಂದು ನಟ ನೆನಪಿರಲಿ ಪ್ರೇಮ್ ಹೇಳಿದ್ದಾರೆ.

ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಸಿದ್ಧಾರೂಢರ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪುಂಡಾಟಿಕೆಯಿಂದ ದೇಶದಲ್ಲಿ ಎಂಇಎಸ್‍ಗೆ ಒಳ್ಳೆಯ ಹೆಸರು ಬರಲ್ಲ. ರಾಜ್ಯದಲ್ಲಿ ಕನ್ನಡಿಗರು ಹಾಗೂ ಮರಾಠಿಗರು ಭಾಂದವ್ಯದಿಂದ ಇದ್ದಾರೆ. ಆ ಭಾಂದವ್ಯವನ್ನ ಹಾಳು ಮಾಡುವಂತಹ ಕೆಲಸಕ್ಕೆ ಎಂಇಎಸ್ ಕೈ ಹಾಕಬಾರದು. ಯಾವುದೇ ಸಂಘಟನೆಗಳಿರಲಿ ಶಾಂತಿ ಕಾಪಾಡಬೇಕು ವ್ಯಕ್ತಡಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಕಾರಿನ ಮೇಲೆ ಶಿವಸೇನೆ ಪುಂಡರಿಂದ ಕಲ್ಲು ತೂರಾಟ

ರಾಜ್ಯದಲ್ಲಿ ಮರಾಠಿ ಚಿತ್ರಗಳಿಗೂ ಹಾಗೂ ಹಿಂದಿ ಚಿತ್ರಗಳಿಗೂ ಅವಕಾಶ ನೀಡಲಾಗಿದೆ. ಎಂಇಎಸ್‍ನವರು ಸಾರ್ವಜನಿಕ ಆಸ್ತಿಪಾಸ್ತಿ ಹಾಳು ಮಾಡುವುದರಿಂದ ಏನನ್ನೂ ಸಾಧಿಸಲಾಗುವುದಿಲ್ಲ. ಎಂಇಎಸ್ ಬ್ಯಾನ್ ವಿಚಾರದಲ್ಲಿ ಸರ್ಕಾರದ ನಿಲುವು ಏನಿದೆಯೋ ಗೊತ್ತಿಲ್ಲ. ಆದರೆ ಕನ್ನಡಿಗರ ಮೇಲಿನ ದಬ್ಬಾಳಿಕೆ ಸಹಿಸಲ್ಲ. ಕನ್ನಡ ಚಿತ್ರರಂಗ ಹೋರಾಟಕ್ಕಿಳಿದರೆ ನಮ್ಮವರಿಗೆ ತೊಂದರೆಯಾಗಲಿದೆ ಎನ್ನುವ ಹಿನ್ನೆಲೆ ಶಾಂತ ರೀತಿಯಲ್ಲಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರೋಲ್ಲ, ಕನ್ನಡಿಗರ ಶಕ್ತಿ ಪ್ರದರ್ಶಿಸುವ ಕಾಲ ಬಂದಿದೆ: ಹೆಚ್‍ಡಿಕೆ

Comments

Leave a Reply

Your email address will not be published. Required fields are marked *