ಓಮಿಕ್ರಾನ್ ಆತಂಕ – ವಿದೇಶದಿಂದ ಬಂದ 17 ಜನ ಕ್ವಾರಂಟೈನ್

ಕಾರವಾರ: ಕರಾವಳಿಯ ಉಡುಪಿ, ಮಂಗಳೂರು ಭಾಗದಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗುತ್ತಿದ್ದಂತೆ ಗಡಿ ಜಿಲ್ಲೆ ಉತ್ತರ ಕನ್ನಡದಲ್ಲೂ ಕಠಿಣ ನಿಯಮಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಜಾರಿ ಮಾಡಿದ್ದು, ವಿದೇಶದಿಂದ ಜಿಲ್ಲೆಗೆ ಆಗಮಿಸಿರುವ 17 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಜಿಲ್ಲೆಗೆ ಆಗಮಿಸಿರುವ 218 ಜನರ ಜಿನೋಮ್ ಸೀಕ್ವೆನ್ಸ್ ತಪಾಸಣೆಗೆ ಕಳುಹಿಸಿರುವ ಜಿಲ್ಲಾ ಆರೋಗ್ಯ ಇಲಾಖೆ ಇದೀಗ ಜಿಲ್ಲೆಗೆ ಬರುವ ವಿದೇಶಿ ಪ್ರವಾಸಿಗರಿಗೂ ಕ್ವಾರಂಟೈನ್‍ಗೆ ಸೂಚಿಸಿದೆ. ಇದನ್ನೂ ಓದಿ: ಉಡುಪಿಯ ಇಬ್ಬರಲ್ಲಿ ಓಮಿಕ್ರಾನ್ ವೈರಸ್ ಪತ್ತೆ

ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಓಮಿಕ್ರಾನ್ ಹೆಚ್ಚಾಗಿ ಕಂಡುಬಂದಿರುವ ದೇಶಗಳಿಂದ ಭಾರತಕ್ಕೆ ಆಗಮಿಸಿ ಅಲ್ಲಿಂದ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸುವ ಜನರ ಮೇಲೆ ನಿಗಾ ವಹಿಸಲಾಗಿದ್ದು, ವಿದೇಶದಿಂದ ಬರುವ ಎಲ್ಲರನ್ನೂ ಕೂಡ ಕೊರೊನಾ ಟೆಸ್ಟ್ ಮಾಡಿಸಿ ನೆಗೆಟಿವ್ ಬಂದರೆ ಅವರನ್ನು ಹೋಂ ಐಸೋಲೇಶನ್ ಮಾಡಲಾಗುತ್ತಿದೆ. ಇದೀಗ ಒಮ್ಮೆ ಕೊರೊನಾ ಟೆಸ್ಟ್ ಮಾಡಿ 8 ದಿನಗಳ ಬಳಿಕ ಮತ್ತೊಮ್ಮೆ ಟೆಸ್ಟ್ ಮಾಡಲಾಗುತ್ತಿದೆ. ಜೊತೆಗೆ ಅವರ ಕೈಗೆ ಕ್ವಾರಂಟೈನ್ ಮುದ್ರೆ ಹಾಕಲಾಗಿದೆ. ಈ ಮೂಲಕ ಓಮಿಕ್ರಾನ್ ಹರಡದಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮಾತನಾಡಲು ನಿರಾಕರಿಸಿದಕ್ಕೆ ಯುವತಿಗೆ ಆ್ಯಸಿಡ್ ದಾಳಿ ಬೆದರಿಕೆ ಹಾಕ್ದ

Comments

Leave a Reply

Your email address will not be published. Required fields are marked *