ಅಖಿಲೇಶ್ ಯಾದವ್‍ಗೆ ಕೊರೊನಾ ನೆಗೆಟಿವ್ – ಪತ್ನಿ, ಮಗಳಿಗೆ ಪಾಸಿಟಿವ್

Dimple Yadav

ಲಕ್ನೋ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಹಾಗೂ ಪುತ್ರಿಗೆ ಕೊರೊನಾ ವೈರಸ್ ದೃಢಪಟ್ಟಿದೆ.

ಬುಧವಾರ ನಡೆಸಿದ ಕೋವಿಡ್-19 ಪರೀಕ್ಷೆಯಲ್ಲಿ ಅಖಿಲೇಶ್ ಯಾದವ್ ಅವರಿಗೆ ನೆಗೆಟಿವ್ ವರದಿ ಬಂದಿದೆ. ಅವರ ಪತ್ನಿ, ಮಾಜಿ ಸಂಸದೆ ಡಿಂಪಲ್ ಯಾದವ್ ಮತ್ತು ಮಗಳಿಗೆ ಕೊರೊನಾ ದೃಢಪಟ್ಟಿದೆ. ಇದನ್ನೂ ಓದಿ: ಇನ್ಮುಂದೆ 21 ವಯಸ್ಸಿನವರೂ ʻಎಣ್ಣೆʼ ಹೊಡಿಯಬಹುದು – ಹರಿಯಾಣ

ಈ ಕುರಿತಂತೆ ಡಿಂಪಲ್ ಯಾದವ್ ತಮ್ಮ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ. ನನಗೆ ಕೋವಿಡ್-19 ದೃಢಪಟ್ಟಿದೆ. ನಾನು ಕೋವಿಡ್‌ ಲಸಿಕೆಯ ಎರಡೂ ಡೋಸ್‌ ಪಡೆದುಕೊಂಡಿದ್ದೇನೆ. ನನಗೆ ಯಾವುದೇ ರೋಗಲಕ್ಷಣಗಳು ಕಂಡುಬಂದಿಲ್ಲ. ಇದೀಗ ನಾನು ಕ್ವಾರಂಟೈನ್‍ನಲ್ಲಿದ್ದು, ಇತ್ತೀಚೆಗಷ್ಟೇ ನನ್ನನ್ನು ಭೇಟಿಯಾದ ಎಲ್ಲರೂ ಶೀಘ್ರದಲ್ಲಿಯೇ ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ವಿನಂತಿಸಿದ್ದಾರೆ.

ಡಿಂಪಲ್ ಯಾದವ್ ಮತ್ತು ಅವರ ಮಗಳಿಗೆ ಕೊರೊನಾ ದೃಢಪಟ್ಟಿರುವುದರಿಂದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಕುರಿತಂತೆ ಪ್ರಚಾರ ನಡೆಸಲು ಅಖಿಲೇಶ್ ಯಾದವ್ ಅವರಿಗೆ ಅಡ್ಡಿಯುಂಟಾಗಬಹುದು. ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ರಿಲಯನ್ಸ್‌, ಪತಂಜಲಿ, ಟಾಟಾ, ಇನ್ಫೋಸಿಸ್‌ ಸೇರಿ 11 ಖಾಸಗಿ ಸಂಸ್ಥೆಗಳಿಗೆ ಸಿಐಎಸ್‌ಎಫ್‌ ಭದ್ರತೆ

Comments

Leave a Reply

Your email address will not be published. Required fields are marked *