ಓಮಿಕ್ರಾನ್ ಭೀತಿ – ಉತ್ತರ ಪ್ರದೇಶದಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಜಾರಿ

ಲಕ್ನೋ: ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಉತ್ತರ ಪ್ರದೇಶವು ರಾತ್ರಿ ಕರ್ಫ್ಯೂ ಕ್ರಮವನ್ನು ಜಾರಿ ಮಾಡಿದೆ.

ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 11 ಗಂಟೆಯಿAದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಇರಲಿದೆ. ಮದುವೆ ಸಮಾರಂಭಗಳಿಗೆ 200ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಹೊರ ರಾಜ್ಯದಿಂದ ಬರುವ ಜನರನ್ನು ಪರೀಕ್ಷಿಸಿ, ಅವರ ಆರೋಗ್ಯದ ಮೇಲೆ ನಿಗಾ ಇಡಬೇಕು. ಅಗತ್ಯವಿದ್ದರೆ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕು ಅಥವಾ ಅವರನ್ನು ಕ್ವಾರಂಟೈನ್ ಮಾಡಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ. ಇದನ್ನೂ ಓದಿ: ಬೂಸ್ಟರ್ ಡೋಸ್ ಅಗತ್ಯತೆ ಬಗ್ಗೆ ಅಧ್ಯಯನ ನಡೆಸಲು ಮೋದಿ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವಂತಹ ಸಲಹೆಗಳ ಮೇರೆಗೆ ರಾಜ್ಯದಲ್ಲಿ ಸೂಕ್ತ ನಿರ್ಬಂಧನೆಗಳನ್ನು ಹೇರಲಾಗಿದೆ. ಕೋವಿಡ್-19ರ ವಿರುದ್ಧ ನಮ್ಮ ಹೋರಾಟ ಮುಗಿದಿಲ್ಲ ಎಂದು ಸ್ಪಷ್ಪಪಡಿಸಿದರು.

ಉತ್ತರ ಪ್ರದೇಶದಲ್ಲಿ ಗುರುವಾರ 31 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟು 2 ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.  ಇದನ್ನೂ ಓದಿ: ಚಲಿಸುತ್ತಿದ್ದ ಹಡಗಿನಲ್ಲಿ ಬೆಂಕಿ – 32 ಮಂದಿ ದುರ್ಮರಣ

Comments

Leave a Reply

Your email address will not be published. Required fields are marked *