ಹಾಸನ: ಕಾವೇರಿ ನೀರಿಗಾಗಿ ಗಾಂಧೀಜಿ ಅವರ ದಂಡಿ ಸತ್ಯಾಗ್ರಹದ ರೀತಿ ಈ ಹೋರಾಟ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ಹಾಸನದ ಆರ್‌ಸಿ ರಸ್ತೆಯಲ್ಲಿರುವ ವೆಸ್ಲಿ ಚರ್ಚ್‍ಗೆ ಭೇಟಿ ನೀಡಿ ಎಲ್ಲರ ಪರವಾಗಿ ಶುಭಾಶಯ ತಿಳಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರವರ ಧರ್ಮ ಅವರು ಉಳಿಸಿಕೊಳ್ಳಬೇಕು. ಇದು ಮೂಲಭೂತವಾಗಿ ನಮಗೆ ಸಂವಿಧಾನದಲ್ಲಿ ಬಂದ ಹಕ್ಕು. ಪ್ರತಿಯೊಬ್ಬ ವ್ಯಕ್ತಿಯೂ ಪ್ರೀತಿ ವಿಶ್ವಾಸದಿಂದ ಬದುಕಲು ಎಲ್ಲ ಧರ್ಮದಲ್ಲೂ ಅವಕಾಶ ಕೊಟ್ಟಿದೆ ಎಂದರು. ಇದನ್ನೂ ಓದಿ: ಮಹಿಳೆಯಿಂದ ವಂಚನೆ – ಪೊಲೀಸ್ ಠಾಣೆ ಮೆಟ್ಟಿಲೇರಿದ ನಿರ್ದೇಶಕ ನಾಗಶೇಖರ್

ಮೇಕೆದಾಟು ಯೋಜನೆ ಹೋರಾಟವನ್ನು ಡಿಕೆಶಿ ಹೈಜಾಕ್ ಮಾಡಿದ್ದಾರೆ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಬಹಳ ದೊಡ್ಡವರು. ಕುಮಾರಸ್ವಾಮಿ ಯಾವಾಗ ಹೋರಾಟ ಮಾಡಿದ್ದಾರೋ ಗೊತ್ತಿಲ್ಲ. ಆದರೆ ಕಾಂಗ್ರೆಸ್ ಹೋರಾಟ ಮಾಡಿದ ನಂತರ ಹೋರಾಟ ಮಾಡುವುದು ಅವರ ಮನಸ್ಸಿನಲ್ಲಿತ್ತು ಅಂತ ಅಧಿವೇಶನದಲ್ಲಿ ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ: ನಳಿನ್ ಕುಮಾರ್ ಕಟೀಲ್

ವಿಧಾನ ಪರಿಷತ್‍ನಲ್ಲಿ ನಡೆದ ಗಲಾಟೆ ಬಗ್ಗೆ ಸ್ಪೀಕರ್ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರ ಬಗ್ಗೆ ಮಾತನಾಡಿದ ಅವರು, ಬಸವರಾಜ ಹೊರಟ್ಟಿ ಅವರು ರಾಜಕೀಯಕ್ಕೋಸ್ಕರ ಏನು ಮಾಡಿದರು ಸ್ವಾಗತಿಸುತ್ತೇವೆ ಎಂದರು. ಇದನ್ನೂ ಓದಿ: ಮೋದಿ ಫೋಬಿಯಾ ಎನ್ನುವಂತೆ ಕಾಂಗ್ರೆಸ್‍ನವರು ನಡೆದುಕೊಳ್ಳುತ್ತಿದ್ದಾರೆ: ಪ್ರಹ್ಲಾದ್ ಜೋಶಿ
ಮಾಜಿ ಸಚಿವ ಎ.ಮಂಜು ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತಂತೆ ಪ್ರತಿಕ್ರಿಯಿಸಿ, ನಮಗೆ ಯಾವುದೇ ಅರ್ಜಿ ಬಂದಿಲ್ಲ. ಅರ್ಜಿ ಬಂದರೆ ಅಲ್ಲಂ ವೀರಭದ್ರಪ್ಪ ಸಮಿತಿಗೆ ಹೋಗುತ್ತದೆ. ಅವರ ಮಗನಿಗೆ ನಾವು ಟಿಕೆಟ್ ಕೊಟ್ಟಿದ್ದೇವೆ. ನಾವೇ ಅವರನ್ನು ಮಂತ್ರಿ ಮಾಡಿದ್ದೇವೆ, ಎ.ಮಂಜು ನನ್ನ ಒಳ್ಳೆಯ ಸ್ನೇಹಿತ. ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿಲ್ಲ.

2013ರಲ್ಲಿ ನಾವು ಅಧಿಕಾರಕ್ಕೆ ಬಂದ ಮೇಲೆ ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಿದ್ದೆವು. ಆಗ ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಕಾಂಗ್ರೆಸ್-ಜೆಡಿಎಸ್ ಸರ್ಕಾರ ಇದ್ದುದರಿಂದ ಎನ್ವಿರಾನ್ಮೆಂಟ್ ಕ್ಲಿಯರೆನ್ಸ್ ಕೊಡಲಿಲ್ಲ. ಇದು ಡಬಲ್ ಇಂಜಿನ್ ಸರ್ಕಾರ ಎಂದು ಬಿಜೆಪಿ ಆರೋಪಿಸಿತ್ತು ಎಂದು ತಿಳಿಸಿದರು.

ರೈತರಿಗೆ ನ್ಯಾಯಯುತವಾದ ನೀರು ಸಿಗಬೇಕು, ಬೆಂಗಳೂರಿಗೆ ನಿಗದಿತ ನೀರು ಪೂರೈಕೆಯಾಗಬೇಕು. ನಮ್ಮ ನೀರು ನಮ್ಮ ಹಕ್ಕು, ಕಾವೇರಿ ನಮ್ಮದು. ತಮಿಳುನಾಡಿಗೆ ಏನು ಶೇರ್ ಹೋಗಬೇಕು ಅದಕ್ಕೆ ನಮ್ಮ ತಕರಾರಿಲ್ಲ. ಇಲ್ಲಿನ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಸರ್ಕಾರ ಸಭೆ ನಡೆಸಿ ಒಂದೇ ದಿನದಲ್ಲಿ ಸಮಸ್ಯೆ ಬಗೆಹರಿಸಬಹುದಿತ್ತು. ಆದರೆ ಮಾಡಲಿಲ್ಲ. ಹೀಗಾಗಿ ಪಕ್ಷಭೇದ ಮರೆತು ಜನವರಿ 9 ರಿಂದ ಪಾದಯಾತ್ರೆ ಮೂಲಕ ಹೋರಾಟ ಮಾಡುತ್ತಿದ್ದೇವೆ. ರೈತ ಸಂಘಟನೆಗಳು, ಕಲಾವಿದರಿಗೆ, ಚಿತ್ರರಂಗದ ಎಲ್ಲಾ ಸ್ನೇಹಿತರಿಗೂ ಆಹ್ವಾನ ನೀಡಿದ್ದೇವೆ. ನೆಲ-ಜಲ ವಿಚಾರದಲ್ಲಿ ಎಲ್ಲರೂ ಪಕ್ಷಭೇದ ಮರೆತು ಹೋರಾಟ ಮಾಡಬೇಕು. ಈ ಹೋರಾಟ ಇತಿಹಾಸದ ಪುಟ ಸೇರಬೇಕು. ಗಾಂಧೀಜಿ ಅವರ ದಂಡಿ ಸತ್ಯಾಗ್ರಹದ ರೀತಿ ಈ ಹೋರಾಟ ಮಾಡುತ್ತಿದ್ದೇನೆ. ಒಂದು ದಿನ 18 ರಿಂದ 20 ಕಿಲೋಮೀಟರ್ ಪಾದಯಾತ್ರೆ ಮಾಡಲಿದ್ದೇನೆ.

Leave a Reply