ಪುನೀತ್ ಪ್ರೇರಣೆ – ಚಾಮರಾಜನಗರದಲ್ಲಿ ಇದುವರೆಗೆ 9,500 ಮಂದಿ ನೇತ್ರದಾನಕ್ಕೆ ನೋಂದಣಿ

ಚಾಮರಾಜನಗರ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನವಾಗಿ ಇಂದಿಗೆ ಎರಡು ತಿಂಗಳಾಗಿದೆ. ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ಅವರಿಂದ ಸಾಕಷ್ಟು ಜನ ಪ್ರೇರಣೆಗೊಂಡು ನೇತ್ರದಾನ ನೋಂದಣಿಗೆ ಮುಂದಾಗುತ್ತಿದ್ದಾರೆ. ಪುನೀತ್ ಅವರ ತವರು ಜಿಲ್ಲೆ ಚಾಮರಾಜನಗರದಲ್ಲಿ ಎರಡು ತಿಂಗಳ ಅವಧಿಯಲ್ಲಿ 9,500ಕ್ಕೂ ಹೆಚ್ಚು ಜನರು ನೇತ್ರದಾನಕ್ಕೆ ನೋಂದಣಿ ಮಾಡಿಸಿದ್ದಾರೆ.

ಪುನೀತ್ ಅವರ ನೇತ್ರದಾನದಿಂದ ಸ್ಫೂರ್ತಿಗೊಂಡ ತವರು ಜಿಲ್ಲೆಯ ಜನತೆ ನೇತ್ರದಾನ ನೋಂದಣಿಗೆ ಮುಂದಾಗುತ್ತಿದ್ದು, ನಿರೀಕ್ಷೆಗೂ ಮೀರಿ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. 46ನೇ ವಯಸ್ಸಿನಲ್ಲಿ ಅಪ್ಪು ನಿಧನ ಹಿನ್ನಲೆಯಲ್ಲಿ ಜಿಲ್ಲಾಡಳಿತ ಹಾಗೂ ರೆಡ್ ಕ್ರಾಸ್ ಸಂಸ್ಥೆ ಜಿಲ್ಲೆಯಾದ್ಯಂತ 46 ಸಾವಿರ ಜನರನ್ನು ನೇತ್ರದಾನಕ್ಕೆ ನೊಂದಾಯಿಸುವ ಗುರಿ ಹೊಂದಿದೆ. ಇದನ್ನೂ ಓದಿ: ವೀಡಿಯೋ: ಮೇಕಪ್ ಆರ್ಟ್‍ನಿಂದ ಶಾರೂಖ್ ಆಗಿ ರೂಪಾಂತರಗೊಂಡ ಯುವತಿ

ಚಾಮರಾಜನಗರ ಸರ್ಕಾರಿ ಮೆಡಿಕಲ್ ಆಸ್ಪತ್ರೆಯಲ್ಲಿ ನೇತ್ರ ಸಂಗ್ರಹಣ ಕೇಂದ್ರ ಸ್ಥಾಪನೆಗೆ ನಿರ್ಧಾರ ಮಾಡಲಾಗಿದ್ದು, ನೇತ್ರ ಸಂಗ್ರಹಣಾ ಕಾರ್ಯಕ್ಕೆ ವೈದ್ಯರು ಸೇರಿದಂತೆ ಸ್ವಯಂ ಸೇವಾ ಸಂಘಟನೆಗಳ ಸದಸ್ಯರ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ. ಇದನ್ನೂ ಓದಿ:  ಮೊಬೈಲ್ ಕದ್ದಿದ್ದಕ್ಕೆ ಬಾಲಕಿಗೆ ಹಿಗ್ಗಾಮುಗ್ಗ ಥಳಿಸಿದ ಯುವಕರು

Comments

Leave a Reply

Your email address will not be published. Required fields are marked *