ಎ.ಆರ್. ರೆಹಮಾನ್ ಮಗಳ ನಿಶ್ಚಿತಾರ್ಥ- ಫೋಟೋ ವೈರಲ್

ಮುಂಬೈ: ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರ ಮಗಳಾದ ಖತೀಜಾ ರೆಹಮಾನ್ ಅವರನ್ನು ರಿಯಾಸ್ದೀನ್ ಶೇಖ್ ಮೊಹಮ್ಮದ್ ಅವರು ಮದುವೆ ಆಗಲಿದ್ದಾರೆ. ನಿಶ್ಚಿತಾರ್ಥದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ದೇವರ ಆಶೀರ್ವಾದದಿಂದ ರಿಯಾಸ್ದೀನ್ ಶೇಖ್ ಮೊಹಮ್ಮದ್ ಜೊತೆ ನನ್ನ ನಿಶ್ಚಿತಾರ್ಥ ನೆರವೇರಿತು ಅಂತ ತಿಳಿಸಲು ಖುಷಿ ಆಗುತ್ತಿದೆ. ರಿಯಾಸ್ದೀನ್ ಶೇಖ್ ಮೊಹಮ್ಮದ್ ಅವರು ಓರ್ವ ಉದ್ಯಮಿ ಮತ್ತು ಆಡಿಯೋ ಇಂಜಿನಿಯರ್ ಆಗಿದ್ದಾರೆ. ನನ್ನ ಹುಟ್ಟುಹಬ್ಬದ ದಿನವೇ ಆಪ್ತರು ಮತ್ತು ಕುಟುಂಬದ ಸದಸ್ಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ನಡೆಯಿತು ಎಂದು ಖತೀಜಾ ರೆಹಮಾನ್ ಅವರು ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಸಮೇತ ಪೋಸ್ಟ್ ಮಾಡಿದ್ದಾರೆ. ಎಂಗೇಜ್‍ಮೆಂಟ್ ಬಳಿಕ ಈ ವಿಷಯವನ್ನು ಸೋಶಿಯಲ್ ಮೀಡಿಯಾ ಮೂಲಕ ಖತೀಜಾ ಅವರು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಹಾಗೂ ಅನೇಕ ಸೆಲೆಬ್ರಿಟಿಗಳು ಕಾಮೆಂಟ್ ಮಾಡಿ ಶುಭ ಕೋರಿದ್ದಾರೆ. ಇದನ್ನೂ ಓದಿ:  ಮೊದಲ ಮಗುವಿನ ನಿರೀಕ್ಷೆಯಲ್ಲಿ ಸಂಜನಾ ಗಲ್ರಾನಿ

 

View this post on Instagram

 

A post shared by 786 Khatija Rahman (@khatija.rahman)

ಎಆರ್ ರೆಹಮಾನ್ ಅವರಿಗೆ ಮೂವರು ಮಕ್ಕಳು. ಇಬ್ಬರು ಹೆಣ್ಣುಮಕ್ಕಳ ಪೈಕಿ ಹಿರಿಯ ಪುತ್ರಿ ಖತೀಜಾ ರೆಹಮಾನ್. ಡಿ.29ರಂದು ಖತೀಜಾ ರೆಹಮಾನ್ ಅವರ ನಿಶ್ಚಿತಾರ್ಥ ನಡೆದಿದೆ. ಎಂಗೇಜ್‍ಮೆಂಟ್ ಸಂದರ್ಭದಲ್ಲಿ ತಾವು ಧರಿಸಿದ್ದ ಡ್ರೆಸ್‍ನಲ್ಲಿಯೇ ಖತೀಜಾ ಫೋಟೋ ಪೋಸ್ಟ್ ಮಾಡಿದ್ದಾರೆ. ತಂದೆಯ ರೀತಿಯೇ ಖತೀಜಾ ಕೂಡ ಸಂಗೀತದಲ್ಲಿ ಆಸಕ್ತಿ ಹೊಂದಿದ್ದಾರೆ. ಗಾಯಕಿಯಾಗಿ ಅವರು ಗುರುತಿಸಿಕೊಂಡಿದ್ದಾರೆ. ಕಳೆದ ವರ್ಷ ನೆಟ್​ಫ್ಲಿಕ್ಸ್​ನಲ್ಲಿ ಬಿಡುಗಡೆಯಾದ ಮಿಮಿ ಸಿನಿಮಾದಲ್ಲಿ ಅವರೊಂದು ಗೀತೆ ಹಾಡಿದ್ದರು. ತಮಿಳು ಸಿನಿಮಾಗಳ ಅನೇಕ ಗೀತೆಗಳಿಗೆ ಅವರು ಧ್ವನಿ ನೀಡಿದ್ದಾರೆ. ಇದನ್ನೂ ಓದಿ: ಪುನೀತ್ ಭಾವಚಿತ್ರದ ಎದುರೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

Comments

Leave a Reply

Your email address will not be published. Required fields are marked *