ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ – ಮನೆಯಲ್ಲಿದ್ದ 3 ಲಕ್ಷ ನಗದು, ಚಿನ್ನ ಬೆಂಕಿಗಾಹುತಿ

ಹಾವೇರಿ: ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ಹೊತ್ತಿಕೊಂಡು ಗುಡಿಸಲಿನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಬಡಮಲ್ಲಿ ತಾಂಡಾದಲ್ಲಿ ನಡೆದಿದೆ.

ಗ್ರಾಮದ ಅಂಗನವಾಡಿ ಸಹಾಯಕಿಯಾದ ವಿನೋದಾ ಎಂಬುವರು ಗುಡಿಸಲಿನಲ್ಲಿ ವಾಸಿಸುತ್ತಿದ್ದು, ದೇವರ ಮುಂದೆ ದೀಪ ಹಚ್ಚಿಟ್ಟು ಅಂಗನವಾಡಿಗೆ ಕೆಲಸಕ್ಕೆ ಹೋಗಿದ್ದರು. ಕೆಲ ಹೊತ್ತಿನಲ್ಲಿ ದೀಪದ ಬೆಂಕಿ ಗುಡಿಸಲಿಗೆ ಆವರಿಸಿ ಗುಡಿಸಲಿನಲ್ಲಿದ್ದ ಮೂರು ಲಕ್ಷ ನಗದು ಹಣ ಮತ್ತು ಐವತ್ತು ಗ್ರಾಂ ತೂಕದ ಚಿನ್ನಾಭರಣ ಬೆಂಕಿಗೆ ಆಹುತಿಯಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಲಾಕ್‍ಡೌನ್ ಮಾಡೋ ಉದ್ದೇಶ ಸರ್ಕಾರಕ್ಕೆ ಇಲ್ಲ: ಬಿ.ಸಿ ಪಾಟೀಲ್

ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ. ಹೊಸ ಮನೆಯ ನಿರ್ಮಾಣಕ್ಕಾಗಿ ಮನೆಯಲ್ಲಿ ಹಣವನ್ನು ಕೂಡಿ ಇಟ್ಟಿದ್ದರು. ಅದರೆ ಬೆಂಕಿಗೆ ಮನೆಯಲ್ಲಿ ಇದ್ದ ನಗದು ಸುಟ್ಟು ಇಡೀ ಕುಟುಂಬವೇ ಕಣ್ಣೀರು ಹಾಕುತ್ತಿದೆ. ಸ್ಥಳಕ್ಕೆ ಕಾಗಿನೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕೊರೊನಾ ಸ್ಫೋಟ ಒಟ್ಟು 2,479 ಪ್ರಕರಣ – ಬೆಂಗ್ಳೂರಲ್ಲಿ 2,053 ಕೇಸ್

Comments

Leave a Reply

Your email address will not be published. Required fields are marked *