ಪಬ್ಲಿಕ್ ಟಿವಿಗೆ ಗೌರವ – ಅತ್ಯುತ್ತಮ ರಾಜಕೀಯ ವಿಶ್ಲೇಷಣೆಗೆ KWJ ಪ್ರಶಸ್ತಿ

ಕಲಬುರಗಿ: ಸಾರ್ಥಕ ದಶಕದ ಅಂಚಿನಲ್ಲಿರುವ ಪಬ್ಲಿಕ್ ಟಿವಿ ಮುಡಿಗೆ ಮತ್ತೊಂದು ಗರಿಮೆ. ಅತ್ಯುತ್ತಮ ರಾಜಕೀಯ ವಿಶ್ಲೇಷಣೆಗಾಗಿ ಕರ್ನಾಟಕ ವೃತ್ತಿನಿರತ ಪತ್ರಕರ್ತರ ಸಂಘ ಪ್ರಶಸ್ತಿ ನೀಡಿ ಗೌರವಿಸಿದೆ.

ಕಲಬುರಗಿಯಲ್ಲಿ ನಡೆದ 36ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಪಬ್ಲಿಕ್ ಟಿವಿ ಪರವಾಗಿ ಸಂಪಾದಕ ಸಿ ದಿವಾಕರ್ ಪ್ರಶಸ್ತಿ ಸ್ವೀಕರಿಸಿದರು. ಮಾಧ್ಯಮ ಕ್ಷೇತ್ರದ ವಿವಿಧ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದನ್ನೂ ಓದಿ: ಪಂತ್ ವಿವಾದಾತ್ಮಕ ಕ್ಯಾಚ್ – ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *