ಬೆಂಗಳೂರು: ಪಂಜಾಬ್‍ಗೆ ಪ್ರಧಾನಿ ಮೋದಿಗೆ ಭೇಟಿ ನೀಡಿದ ವೇಳೆ ಭದ್ರತಾ ಲೋಪವೆಸಗಿದ ಪಂಜಾಬ್ ಸರ್ಕಾರದ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಹಲವು ನಾಯಕರು ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿಜೀ ಅವರು ಇಂದು ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾಗಿರುವ ಭದ್ರತಾ ಲೋಪವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಘಟನೆಗಳು ಯಾವುದೇ ಕಾರಣಕ್ಕೂ ನಡೆಯಬಾರದು. ಇದೇ ಸಂದರ್ಭದಲ್ಲಿ ಇದು ಒಂದು ಸಹಜ ಘಟನೆ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಛನ್ನಿ ಅವರು ನೀಡಿರುವ ಬೇಜವಾಬ್ದಾರಿ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಪಂಜಾಬ್ ತನ್ನ ಭವಿಷ್ಯದ ಬಗ್ಗೆ ಮುಂದೆ ಚಿಂತಿಸಬೇಕಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಜನರಿಲ್ಲದೇ ಖಾಲಿ ಕುರ್ಚಿಗಳಿದ್ದ ಕಾರಣ ಪಿಎಂ ರ‍್ಯಾಲಿ ರದ್ದು: ಕಾಂಗ್ರೆಸ್ ವ್ಯಂಗ್ಯ
ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರು ಇಂದು ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾಗಿರುವ ಭದ್ರತಾ ಲೋಪವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಘಟನೆಗಳು ಯಾವುದೇ ಕಾರಣಕ್ಕೂ ನಡೆಯಬಾರದು.
1/2@narendramodi— Basavaraj S Bommai (@BSBommai) January 5, 2022
ಈ ಬಗ್ಗೆ ಇಂಧನ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಕೂಡ ಟ್ವೀಟ್ ಮಾಡಿದ್ದು, ತುರ್ತು ಪರಿಸ್ಥಿತಿ ಹೇರಿ ಜನರ ಸ್ವಾತ್ಯಂತ್ರ ಕಸಿದುಕೊಂಡಿದ್ದ ಕಾಂಗ್ರೆಸ್ ಇಂದು ಪಂಜಾಬ್ ನಲ್ಲಿ ಪ್ರಧಾನಮಂತ್ರಿಗಳ ಭದ್ರತೆಯನ್ನೇ ಬುಡಮೇಲು ಮಾಡಲು ಪ್ರಯತ್ನಿಸಿದ ಘಟನೆಯನ್ನು ನಾನು ಸಂಪೂರ್ಣವಾಗಿ ಖಂಡಿಸುತ್ತೇನೆ. ಇಂತಹ ಬೆದರಿಕೆಗಳಿಗೆ ಎಂದಿಗೂ ಜಗ್ಗುವುದಿಲ್ಲ. ಕಾಂಗ್ರೆಸ್ ಇದಕ್ಕೆ ತಕ್ಕ ಬೆಲೆಯನ್ನು ಶೀಘ್ರದಲ್ಲೇ ಪಡೆಯಲಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ ಎಂದ ಮೋದಿ
ತುರ್ತು ಪರಿಸ್ಥಿತಿ ಹೇರಿ ಜನರ ಸ್ವಾತ್ಯಂತ್ರ ಕಸಿದುಕೊಂಡಿದ್ದ ಕಾಂಗ್ರೆಸ್ ಇಂದು ಪಂಜಾಬ್ ನಲ್ಲಿ ಪ್ರಧಾನಮಂತ್ರಿಗಳ ಭದ್ರತೆಯನ್ನೇ ಬುಡಮೇಲು ಮಾಡಲು ಪ್ರಯತ್ನಿಸಿದ ಘಟನೆಯನ್ನ ನಾನು ಸಂಪೂರ್ಣವಾಗಿ ಖಂಡಿಸುತ್ತೇನೆ. ಇಂತಹ ಬೆದರಿಕೆಗಳಿಗೆ ಎಂದಿಗೂ ಜಗ್ಗುವುದಿಲ್ಲ. ಕಾಂಗ್ರೆಸ್ ಇದಕ್ಕೆ ತಕ್ಕ ಬೆಲೆಯನ್ನ ಶೀಘ್ರದಲ್ಲೆ ತೆರಲಿದೆ. pic.twitter.com/qda6DJ2GqN
— Sunil Kumar Karkala (@karkalasunil) January 5, 2022
ಬಟಿಂಡಾದಲ್ಲಿ ಇಂದು ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಪಂಜಾಬ್‍ಗೆ ಆಗಮಿಸಿದ್ದರು. ಮಧ್ಯಾಹ್ನ ಹುಸೇನಿವಾಲಾದಲ್ಲಿ ರಾಷ್ಟ್ರೀಯ ಹುತಾತ್ಮರ ಸ್ಮಾರಕ ಸ್ಥಳಕ್ಕೆ ತೆರಳಲು ಹೋಗುತ್ತಿದ್ದಾಗ ಭದ್ರತಾ ಲೋಪವಾಗಿದೆ. ಕಾರ್ಯಕ್ರಮಕ್ಕೆ ಕಾರಿನಲ್ಲಿ ಭದ್ರತಾ ಸಿಬ್ಬಂದಿ ಜೊತೆ ಫ್ಲೈಓವರ್‌ನಲ್ಲಿ ತೆರಳುತ್ತಿದ್ದಾಗ ರೈತರು ಪ್ರತಿಭಟನೆ ಮಾಡುತ್ತಿರುವುದು ಗೊತ್ತಾಗಿದೆ. ಭದ್ರತಾ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‍ನ ಫ್ಲೈಓವರ್‌ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು. ಇದನ್ನೂ ಓದಿ: ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ – ಕಾರ್ಯಕ್ರಮ ರದ್ದು

Leave a Reply