ಅತಿಥಿ ಉಪನ್ಯಾಸಕರ ಸಮಸ್ಯೆಗೆ ಶೀಘ್ರ ಪರಿಹಾರ: ಅಶ್ವಥ್ ನಾರಾಯಣ್ ಭರವಸೆ

ಬೆಂಗಳೂರು: ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ನಿಯೋಗವು ಇಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರನ್ನು ಭೇಟಿ ಮಾಡಿತು.

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಕೂಡ ಅಶ್ವಥ್ ನಾರಾಯಣ್ ಅವರನ್ನು ಭೇಟಿ ಮಾಡಿದ ಸಮಯದಲ್ಲಿ ಇದ್ದರು. ಈ ವೇಳೆ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಆದಷ್ಟು ಬೇಗ ಪರಿಹಾರ ನೀಡುವಂತೆ ನಿಯೋಗವು ಮನವಿ ಸಲ್ಲಿಸಿತು. ಇದನ್ನೂ ಓದಿ:  ಮಾರ್ಚ 15 ರಿಂದ 23 ರ ವರೆಗೆ ರಾಜ್ಯದ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ ಸದಸ್ಯರು, ಅತಿಥಿ ಉಪನ್ಯಾಸಕರ ಸಂಘಟನೆಗಳು ಮತ್ತು ಸಂಬಂಧಿಸಿದ ಎಲ್ಲರೊಂದಿಗೂ ಚರ್ಚಿಸಿ, ಶೀಘ್ರದಲ್ಲೇ ಪರಿಹಾರ ಕಂಡುಹಿಡಿಯಲಾಗುವುದು ಎಂದು ಭರವಸೆ ನೀಡಿದರು.

ನಿಯೋಗದಲ್ಲಿ ಸಂಘಟನೆಯ ಅಧ್ಯಕ್ಷ ಡಾ.ರಘು ಅಕಮಂಚಿ, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ಎಬಿವಿಪಿ ಮುಖಂಡರಾದ ಸ್ವಾಮಿ ಮೊದಲಾದವರು ಇದ್ದರು.

Comments

Leave a Reply

Your email address will not be published. Required fields are marked *