ಕಾನ್ಪುರ ಉದ್ಯಮಿ ಸಾವು – ಉತ್ತರ ಪ್ರದೇಶದ 6 ಪೊಲೀಸರ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಕೆ

ಲಕ್ನೋ: ಉತ್ತರ ಪ್ರದೇಶದ ಕಾನ್ಪುರ ಉದ್ಯಮಿಯೊಬ್ಬರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಪೊಲೀಸ್‌ ಅಧಿಕಾರಿಗಳನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಪೊಲೀಸ್‌ ಅಧಿಕಾರಿಗಳಾದ ಜಗತ್‌ ನಾರಾಯಣ್‌ ಸಿಂಗ್‌, ಕಮಲೇಶ್‌ ಸಿಂಗ್‌ ಯಾದವ್‌, ಅಕ್ಷಯ್‌ ಕುಮಾರ್‌ ಮಿಶ್ರಾ, ವಿಜಯ್‌ ಯಾದವ್‌, ರಾಹುಲ್‌ ದುಬೆ ಅವರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ಭದ್ರತಾ ವೈಫಲ್ಯ -150 ಅಪರಿಚಿತರ ವಿರುದ್ಧ ಎಫ್‌ಐಆರ್‌

ಕಳೆದ ವರ್ಷದ ನವೆಂಬರ್‌ನಲ್ಲಿ ಉತ್ತರ ಪ್ರದೇಶ ರಾಜ್ಯ ಸರ್ಕಾರ, ಕೇಂದ್ರ ತನಿಖಾ ಸಂಸ್ಥೆಗೆ ಮಾಡಿದ್ದ ಮನವಿ ಮೇರೆಗೆ ಸಿಬಿಐ ತನಿಖೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಪೊಲೀಸರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಕೊಲೆ, ಅಪರಾಧ ಪಿತೂರಿ ಆರೋಪದಡಿ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಸೆಪ್ಟೆಂಬರ್‌ ತಿಂಗಳಲ್ಲಿ ಉದ್ಯಮಿ ಮನಿಶ್‌ ಗುಪ್ತಾ (36) ಗೋರಖ್‌ಪುರ ಹೋಟೆಲ್‌ನಲ್ಲಿ ತನ್ನ ಸ್ನೇಹಿತರನ್ನು ಭೇಟಿಯಾಗಿದ್ದ. ಈ ವೇಳೆ ಆತ ಇದ್ದ ರೂಮ್‌ಗೆ ಪೊಲೀಸರು ದಾಳಿ ನಡೆಸಿದ್ದರು. ಹಿರಿಯ ಇನ್‌ಸ್ಪೆಕ್ಟರ್‌ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿ, ಗುಪ್ತಾ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲು ತಡ ಮಾಡಿದರು. ಇದರಿಂದ ಗುಪ್ತಾ ಸಾವನ್ನಪ್ಪಿದ ಎಂದು ಆತನ ಕುಟುಂಬದವರು ದೂರಿದ್ದಾರೆ. ಇದನ್ನೂ ಓದಿ: 6ನೇ ಕ್ಲಾಸ್ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ

ಉದ್ಯಮಿ ಮೇಲಿನ ಹಲ್ಲೆ, ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್‌ ನೇತೃತ್ವದ ಸರ್ಕಾರವನ್ನು ವಿರೋಧ ಪಕ್ಷದ ನಾಯಕರು ತರಾಟೆಗೆ ತೆಗೆದುಕೊಂಡಿದ್ದರು.

Comments

Leave a Reply

Your email address will not be published. Required fields are marked *