ಕಾಂಗ್ರೆಸ್ ನಾಯಕರು ಕಾವೇರಿ ಸಂಗಮದಲ್ಲಿ ಜನ್ರಿಗೆ ಕ್ಷಮೆಯಾಚಿಸಬೇಕು: ಆರಗ ಜ್ಞಾನೇಂದ್ರ

Araga Jnanendra

ಬೆಂಗಳೂರು: ಕಾವೇರಿ ನದಿ ನೀರಿನ ನಮ್ಮ ಹಕ್ಕಿನ ಪಾಲು ಪಡೆಯಲು, ವಿಫಲರಾದ ಕಾಂಗ್ರೆಸ್ ನಾಯಕರು ಸಂಗಮದ ದಂಡೆಯಲ್ಲಿ ಕ್ಷಮೆ ಯಾಚಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದರು.

ಕೊರೊನಾ ಮಾರಿಯ ಸೋಂಕಿನ ವಾತಾವರಣದ ನಡುವೆಯೂ ಕಾನೂನನ್ನು ಲೆಕ್ಕಿಸದೆ, ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಅಲ್ಲಿನ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳುತ್ತದೆ ಹಾಗೂ ಕಾಂಗ್ರೆಸ್ ನಾಯಕರ ನಡವಳಿಕೆ ಅತ್ಯಂತ ಬೇಜವಾಬ್ದಾರಿ ಎಂದು ಆಕ್ರೋಶ ಹೊರಹಾಕಿದರು.

ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಜಿಲ್ಲಾಡಳಿತ ನೋಡಿಕೊಳ್ಳುತ್ತಿದೆ. ಕಾಂಗ್ರೆಸ್ ನಾಯಕರು ನೀರಿನ ಮೇಲೆ ರಾಜಕೀಯ ಮಾಡಲು ಹೊರಟಿದ್ದಾರೆ, ಆದರೆ ಜನತೆ ಬುದ್ಧಿವಂತರು ಇವರ ನಾಟಕವನ್ನು ಅರ್ಥ ಮಾಡಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಚಾಲನೆ

ಮೇಕೆದಾಟು ಯೋಜನೆ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಅಧಿಕಾರದಲ್ಲಿದ್ದಾಗ ನಿರ್ಲಕ್ಷ್ಯ ವಹಿಸಿದ್ದಾರೆ. ಈಗ ಮುಂದಿನ ಚುನಾವಣೆ ದೃಷ್ಟಿಯಿಂದ ಪಾದಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ನಮ್ಮ ಸರ್ಕಾರ ಬದ್ಧ ಯಾವುದೇ ಸಂಶಯ ಬೇಡ. ಆದರೆ ವಿವಾದ ಪ್ರಸ್ತುತ ಸರ್ವೋಚ್ಛ ನ್ಯಾಯಾಲಯದ ಮುಂದಿದೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕರು ಅಧಿಕಾರದಲ್ಲಿದ್ದಾಗ ಐದು ವರ್ಷದಲ್ಲಿ ಕೇವಲ ಡಿಪಿಆರ್ ಸಲ್ಲಿಸಿದ್ದು ಬಿಟ್ಟರೆ ಬೇರೆ ಏನೂ ಮಾಡಲಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಸರ್ಕಾರ ಬದುಕಿದ್ಯಾ, ಸತ್ತಿದ್ಯಾ ಅನ್ನೋದನ್ನ ತೋರಿಸ್ತೀವಿ: ಸಚಿವ ಸುಧಾಕರ್

Comments

Leave a Reply

Your email address will not be published. Required fields are marked *