ಆರೋಗ್ಯ ಕೇಂದ್ರದಲ್ಲೇ ಬೂಸ್ಟರ್ ಡೋಸ್ ಪಡೆದ ಬಿ.ಸಿ.ಪಾಟೀಲ್

ಹಾವೇರಿ: ಇಂದಿನಿಂದ ದೇಶಾದ್ಯಂತ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಅಭಿಯಾನ ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾವೇರಿ ಜಿಲ್ಲೆಯಲ್ಲಿ ಲಸಿಕೆಯನ್ನು ಪಡೆದರು.

ಹಾವೇರಿಯ ಹಿರೇಕೆರೂರಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಚಿವ ಬಿ.ಸಿ. ಪಾಟೀಲ್ 60 ವರ್ಷ ಮೇಲ್ಪಟ್ಟ ಹಿನ್ನೆಲೆಯಲ್ಲಿ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವ ಬಿ.ಸಿ. ಪಾಟೀಲ್ ಅವರು, ದೇಶದಲ್ಲಿ ಆರೋಗ್ಯ, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಜನರಿಗೆ ಕೊರೋನಾ ವೈರಸ್ ವಿರುದ್ಧ ಹೋರಾಡಲು ಬೂಸ್ಟರ್ ಡೋಸ್‌ನ್ನು ಇಂದಿನಿಂದ ನೀಡಲಾಗುತ್ತಿದೆ. ಬೂಸ್ಟರ್ ಡೋಸ್ ಲಸಿಕೆ ವೇಳೆ ಮಿಕ್ಸ್ ಡೋಸ್ ನೀಡಲು ಅವಕಾಶವಿಲ್ಲ ಎಂದರು. ಇದನ್ನೂ ಓದಿ: ಕೋವಿಡ್‌ ಟೆಸ್ಟ್‌ ಮಾಡಿಸಿಕೊಳ್ಳಿ ಎಂದ ಆರೋಗ್ಯ ಅಧಿಕಾರಿ ವಿರುದ್ಧ ಡಿಕೆಶಿ ಗರಂ

ಈ ಹಿಂದೆ ಮೊದಲ ಮತ್ತು ಎರಡನೇ ಡೋಸ್ ಯಾವ ಲಸಿಕೆ ಪಡೆಯಲಾಗಿದೆಯೋ ಅದೇ ಲಸಿಕೆ ಪಡೆಯಬೇಕು. ಕೋವಿಶೀಲ್ಡ್, ಕೋವ್ಯಾಕ್ಸಿನ್ 2 ಡೋಸ್ ಲಸಿಕೆ ಪಡೆದವರು, ಬೂಸ್ಟರ್ ಡೋಸ್‌ನ್ನೂ ಕೂಡ ಅವುಗಳನ್ನೇ ಪಡೆಯಬೇಕು. ಮಿಕ್ಸ್ ಬೂಸ್ಟರ್ ಡೋಸ್ ನೀಡಲು ಅನುಮತಿಸುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ನಾಯಕತ್ವಕ್ಕಾಗಿ ಡಿಕೆಶಿಯಿಂದ ಪಾದಯಾತ್ರೆ ಡ್ರಾಮಾ: ಕಟೀಲ್

ಮುಂಚೂಣಿ ಆರೋಗ್ಯ ಕಾರ್ಯಕರ್ತರು, ಆರೋಗ್ಯ ಸೇವಕರು, 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತದೆ. ಮೂರನೇ ಡೋಸ್ ಲಸಿಕೆಯನ್ನು ಪಡೆಯುವುದರಿಂದ ಓಮಿಕ್ರಾನ್ ರೂಪಾಂತರ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುವ ವಿರುದ್ಧ ಶೇ. 88ರಷ್ಟು ರಕ್ಷಣೆ ನೀಡುತ್ತದೆ ಎಂದು ಯುಕೆ ಅಧ್ಯಯನವು ಕಂಡುಹಿಡಿದಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಒಬ್ಬ ಸಾಮಾನ್ಯ ಮನುಷ್ಯ ಸಚಿವನಾಗಿದ್ದಕ್ಕೆ ಹೊಟ್ಟೆ ಉರಿ – ಎಂಬಿಪಿಗೆ ಕಾರಜೋಳ ತಿರುಗೇಟು

ಕಳೆದ ವರ್ಷ ಬಿಸಿ ಪಾಟೀಲ್ ಮನೆಯಲ್ಲೇ ಪ್ರಥಮ ಕೋವಿಡ್ ಲಸಿಕೆಯನ್ನು ಪಡೆದಿದ್ದರು. ಈ ವಿಚಾರ ದೇಶವ್ಯಾಪಿ ಚರ್ಚೆಗೆ ಕಾರಣವಾಗಿತ್ತು.

Comments

Leave a Reply

Your email address will not be published. Required fields are marked *