ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ: ಆರಗ ಜ್ಞಾನೇಂದ್ರ

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ, ದಯವಿಟ್ಟು ನಿಮ್ಮ ರಾಜಕೀಯ ಉದ್ದೇಶದ ನಡಿಗೆ ಕಾರ್ಯಕ್ರಮವನ್ನು ಕೈಬಿಡಿ ಎಂದು ಕಾಂಗ್ರೆಸ್‌ ನಾಯಕರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

ಇವರು ಪಾದಯಾತ್ರೆ ಆರಂಭಿಸಿದಾಗ, ನಮಗೆ ಸಾರ್ವಜನಿಕರ ಆರೋಗ್ಯದ ಮೇಲೆ ಬೀರಬಹುದಾದ ಅಡ್ಡಪರಿಣಾಮದ ಬಗ್ಗೆ ಆತಂಕ ಇತ್ತು. ಆ ಕಾರಣದಿಂದ ನಾವು ಕಾರ್ಯಕ್ರಮವನ್ನು ಮುಂದಕ್ಕೆ ಹಾಕಿಕೊಳ್ಳಿ ಎಂದು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದೆವು. ಈಗ ನಮ್ಮ ಆತಂಕ ನಿಜವಾಗುತ್ತಿದೆ. ಕೊರೊನಾ ಬಗ್ಗೆ ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡುತ್ತಿರುವುದಲ್ಲದೇ ವಿತಂಡ ವಾದ ಮಂಡಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಮುಗಿಯದ ಕೇಸರಿ ಶಲ್ಯ ವಿವಾದ – ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿಗಳ ಗಲಾಟೆ

ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಕೆಲವು ನಾಯಕರಿಗೆ ಸೋಂಕು ತಗುಲಿದ್ದು, ಆಸ್ಪತ್ರೆ ಸೇರಿದ್ದಾರೆ. ಆ ಕಾರಣದಿಂದ ಮತ್ತೊಮ್ಮೆ ಕಾಂಗ್ರೆಸ್ ನಾಯಕರಿಗೆ, ಮನವಿ ಮಾಡುತ್ತೇನೆ. ನಿಮ್ಮ ನಿರ್ಧಾರವನ್ನು ಸಾರ್ವಜನಿಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ, ಪಾದಯಾತ್ರೆಯನ್ನು ಕೈಬಿಡಿ ಎಂದು ಮನವಿ ಮಾಡಿದ್ದಾರೆ.

ಕೊರೊನಾ ಅಪಾಯಕಾರಿ ರೀತಿಯಲ್ಲಿ ಹರಡುತ್ತಿದೆ. ಸಮಾಜದ ಎಲ್ಲಾ ಜನರೂ, ಎಲ್ಲಾ ಕ್ಷೇತ್ರದ ಶ್ರಮಿಕ ವರ್ಗದವರೂ ಆತಂಕಗೊಂಡಿದ್ದಾರೆ. ಈಗಾಗಲೇ ನೀವು ಜನತೆಯ ಆಕ್ರೋಶಕ್ಕೆ ಗುರಿಯಾಗಿದ್ದು, ಅವರ ಕ್ಷಮೆ ಕೇಳಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪ್ರತಿಯೊಬ್ಬರಿಗೂ ಓಮಿಕ್ರಾನ್‌ ಹರಡುತ್ತೆ, ಬೂಸ್ಟರ್‌ನಿಂದಲೂ ಅದನ್ನು ತಡೆಯಲು ಸಾಧ್ಯವಿಲ್ಲ: ICMR ವೈದ್ಯ

Comments

Leave a Reply

Your email address will not be published. Required fields are marked *