ರಾಜ್ಯ ಸರ್ಕಾರದ ಆದೇಶಕ್ಕೆ ಡಿಕೆಶಿ ಮೌನ

ಬೆಂಗಳೂರು: ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆಯಲ್ಲಿ ನಿರತರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು ರಾಜ್ಯ ಸರ್ಕಾರದ ಆದೇಶದ ಕುರಿತಾಗಿ ಮೌನವಾಗಿದ್ದಾರೆ.

ಪಬ್ಲಿಕ್‌ ಟಿವಿ ವರದಿಗಾರರು ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ  ಹೇರಿರುವ ಕುರಿತಾಗಿ ಕೇಳಿದಾಗ, ಡಿ.ಕೆ ಶಿವಕುಮಾರ್‌ ಅವರು ಆದೇಶದ ಕಾಪಿ ತೋರಿಸಿ ಎಂದು ಹೇಳಿದ್ದಾರೆ. ಆರ್ಡರ್ ಕಾಪಿಯನ್ನು ನೋಡಿ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಇದನ್ನೂ ಓದಿ: ಪಾದಯಾತ್ರೆ ಕುರಿತು ನ್ಯಾಯಾಲಯ ನೀಡುವ ಆದೇಶವನ್ನು ಪಾಲನೆ ಮಾಡುತ್ತೇವೆ: ಸಿದ್ದರಾಮಯ್ಯ

ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ರಾಜ್ಯ ಸರ್ಕಾರ ಕಾಂಗ್ರೆಸ್ ನಡೆಸುತ್ತಿದ್ದ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ಹೇರಿದೆ. ಪಾದಯಾತ್ರೆಯನ್ನು ತಕ್ಷಣ ನಿಲ್ಲಿಸುವಂತೆ ಆದೇಶ ಹೊರಡಿಸಲಾಗಿದೆ. ಒಂದು ವೇಳೆ ಸರ್ಕಾರದ ಆದೇಶವನ್ನು ಉಲ್ಲಂಘಿಸಿದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ.  ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸಬೇಕು ಎಂದು ರಾಮನಗರ ಎಸ್‌ಪಿ, ಡಿಸಿಗೆ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಪಾದಯಾತ್ರೆ ತಡೆಯಲು ಯಾರಿಗೆ ಕಾಯುತ್ತಿದ್ದೀರಿ – ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ

ಮೇಕೆದಾಟು ಪಾದಯಾತ್ರೆಗೆ ಅನುಮತಿ ಕೊಟ್ಟಿಲ್ಲದಿದ್ದರೆ ತಡೆಯಲು ಯಾರಿಗಾಗಿ ಕಾಯುತ್ತಿದ್ದೀರಿ ಎಂದು ಹೈಕೋರ್ಟ್ ಸರ್ಕಾರವನ್ನು ಪ್ರಶ್ನಿಸಿ ಛೀಮಾರಿ ಹಾಕಿತ್ತು. ಈ ಬೆನ್ನಲ್ಲೇ ಸರ್ಕಾರ ನಿರ್ಧಾರವನ್ನು ತೆಗೆದುಕೊಂಡಿದೆ.

ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್ ಆಯೋಜಿಸಿದೆ. ಈ ಪಾದಯಾತ್ರೆಯಿಂದ ಕೊರೊನಾ ಮತ್ತಷ್ಟು ಹೆಚ್ಚಳವಾಗಲಿದೆ. ಈ ಪಾದಯಾತ್ರೆಯನ್ನು ಕೈಗೊಂಡವರ ವಿರುದ್ಧ ಕ್ರಮಕ್ಕೆ ಆದೇಶ ನೀಡಬೇಕೆಂದು ಕೋರಿ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಕರ್ನಾಟಕ ಈಗಾಗಲೇ ಕೋವಿಡ್ ನಿಂದ ತತ್ತರಿಸುತ್ತಿದೆ. ಹೀಗಿರುವಾಗ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ ಎಂದು ಆರಂಭದಲ್ಲೇ ಪ್ರಶ್ನಿಸಿ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿತು. ಈ ಬೆನ್ನಲ್ಲೆ ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆಗೆ ರಾಜ್ಯ ಸರ್ಕಾರ ನಿರ್ಬಂಧ ಹೇರಿದೆ. ಇದನ್ನೂ ಓದಿ:  ಕಾಂಗ್ರೆಸ್ ಪಾದಯಾತ್ರೆಯನ್ನು ತಕ್ಷಣವೇ ನಿಲ್ಲಿಸಿ- ಸರ್ಕಾರ ಆದೇಶ

Comments

Leave a Reply

Your email address will not be published. Required fields are marked *