ಸಮನ್ವಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಡಿಕೆಶಿ

ಬೆಂಗಳೂರು: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ನನ್ನಮ್ಮ ಸೂಪರ್ ಸ್ಟಾರ್ ಸ್ಪರ್ಧಿ, ಬಾಲಕಲಾವಿದೆ ಸಮನ್ವಿ ಮನೆಗೆ ಕೆಪಿಸಿಸಿ ಅಧ್ಯಕ್ಷ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಕೆಂಗೇರಿ ರಸ್ತೆಯಲ್ಲಿರುವ ಅಮೃತಾ ರೂಪೇಶ್ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಮಂಗಳವಾರ ಭೇಟಿ ನೀಡಿದರು. ಸಮನ್ವಿ ಅಗಲಿಕೆ ದುಃಖದಲ್ಲಿರುವ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಬಾಲಕಲಾವಿದೆ ಸಮನ್ವಿ ಭಾವಚಿತ್ರ ಗೌರವ ನಮನ ಸಲ್ಲಿಸಿದರು. ಇದನ್ನೂ ಓದಿ: ಕಣ್ಣೀರು ತರಿಸುವಂತಿದೆ ಸಮನ್ವಿ ತಾಯಿ ಅಮೃತಾ ನಾಯ್ಡು ಮನವಿ

6 ವರ್ಷದ ಪುಟ್ಟ ಬಾಲಕಿ ನಾಲ್ಕು ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಳು. ಬೆಂಗಳೂರಿನ ಕೋಣನಕುಂಟೆಯಲ್ಲಿ ತಾಯಿ ಅಮೃತಾ ನಾಯ್ಡು ಮತ್ತು ಮಗಳು ಸಮನ್ವಿ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಆಗ ಟಿಪ್ಪರ್ ಡಿಕ್ಕಿ ಹೊಡದು ಸ್ಕೂಟಿಯಿಂದ ಇಬ್ಬರೂ ಬಿದ್ದರು. ಟಿಪ್ಪರ್ ಲಾರಿಯ ಮಡ್‌ಗಾರ್ಡ್ ಸಮನ್ವಿಗೆ ಗುದ್ದಿದೆ. ಹೀಗಾಗಿ ಹೊಟ್ಟೆ ಭಾಗದಲ್ಲಿ ರಕ್ತಸ್ರಾವ ಆಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಳು. ಇದನ್ನೂ ಓದಿ: ಸಮನ್ವಿ ಮುಂದೆ ದೊಡ್ಡ ಸ್ಟಾರ್‌ ಆಗುತ್ತಿದ್ದಳು: ಸೃಜನ್‌ ಲೋಕೇಶ್‌ ಭಾವುಕ

Comments

Leave a Reply

Your email address will not be published. Required fields are marked *