ಲಕ್ನೋ: ಉತ್ತರ ಪ್ರದೇಶ ಚುನಾವಣೆ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ವಿರುದ್ಧ ಹರಿಹಾಯ್ದಿದ್ದಾರೆ. ಚುನಾವಣೆಯಲ್ಲಿ ಸಮಾಜವಾದಿ ಪಕ್ಷವನ್ನು ಅಧಿಕಾರಕ್ಕೆ ತಂದರೆ, ರಾಜ್ಯದಲ್ಲಿ ಗೂಂಡಾಗಳ ರಾಜ್ಯ ಮರುಕಳಿಸುತ್ತದೆ ಎಂದು ಎಚ್ಚರಿಸಿದ್ದಾರೆ.
ಸಮಾಜವಾದಿ ಪಕ್ಷದ ಮುಖಂಡ ಅಜಮ್ ಖಾನ್ ಬಂಧನಕ್ಕೊಳಗಾಗಿದ್ದಾರೆ. ಅವರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ. ಇಂತಹ ಸಂದರ್ಭದಲ್ಲಿ ಅಖಿಲೇಶ್ ಯಾದವ್ ಕಾನೂನಿನ ಬಗ್ಗೆ ಮಾತನಾಡುತ್ತಾರೆ. ಅವರಿಗೆ ನಾಚಿಕೆಯಾಗಬೇಕು ಎಂದು ಅಮಿತ್ ಶಾ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ – ಇದು ನಾಚಿಗೇಡಿನ ಸಂಗತಿ ಎಂದ ಕೇಜ್ರಿವಾಲ್

ರಾಜ್ಯ ಪೊಲೀಸರು ಭಯಪಡುವಷ್ಟು ಪ್ರಾಬಲ್ಯವನ್ನು ದರೋಡೆಕೋರರು, ಕ್ರಿಮನಲ್‌ಗಳು ಹೊಂದಿದ್ದರು. ಮಹಿಳೆಯರು ಮತ್ತು ಯುವತಿಯರು ಹೊರಗಡೆ ಓಡಾಡಲು ಹೆದರುತ್ತಿದ್ದರು. ಆದರೆ ಅದು ಈಗ ಬದಲಾಗಿದೆ. ದರೋಡೆಕೋರರು, ಅಪರಾಧಿಗಳು ಭಯ ಪಡುತ್ತಿದ್ದಾರೆಂದರೆ, ಸ್ವಯಂಪ್ರೇರಣೆಯಿಂದ ಎಲ್ಲರೂ ಶರಣಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ನಾವು ಕ್ರಿಮಿನಲ್‌ಗಳು ಮತ್ತು ದರೋಡೆಕೋರರನ್ನು ತರಾಟೆಗೆ ತೆಗೆದುಕೊಂಡಿದ್ದೇವೆ. ಅವರನ್ನು ಕಂಬಿ ಹಿಂದೆ ಕಳುಹಸಿದ್ದೇವೆ. ಉತ್ತರ ಪ್ರದೇಶ ಪ್ರಗತಿಯಾಗದ ಹೊರತು ಭಾರತದ ಪ್ರಗತಿ ಸಾಧ್ಯವಿಲ್ಲ. ಯುಪಿ ಇಂದು ಪ್ರಗತಿಯಲ್ಲಿದೆ ಇದು ಭಾರತದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಕೊರೊನಾ ಬಂದಿದೆ – ಇಬ್ರಾಹಿಂ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಆಕ್ರೋಶ

ಉತ್ತರ ಪ್ರದೇಶ ಚುನಾವಣೆ ಇದೇ ಫೆ.10ರಿಂದ ವಿವಿಧ ಹಂತಗಳಲ್ಲಿ ನಡೆಯಲಿದೆ. ಚುನಾವಣೆಯಲ್ಲಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಡುವೆ ತೀವ್ರ ಪೈಪೋಟಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು, ಎಸ್‌ಪಿ ವಿರುದ್ಧ ಹರಿಹಾಯ್ದಿದ್ದಾರೆ.

Leave a Reply