ವೈನ್ ಮದ್ಯವಲ್ಲ, ಮಾರಾಟ ಹೆಚ್ಚಾದ್ರೆ ರೈತರಿಗೆ ಲಾಭ ಸಿಗಲಿದೆ: ಸಂಜಯ್ ರಾವತ್

ಮುಂಬೈ: ವೈನ್ ಮದ್ಯವಲ್ಲ, ಸೂಪರ್ ಮಾರ್ಕೆಟ್‍ಗಳಲ್ಲಿ ಮಾರಾಟ ಮಾಡುವುದರಿಂದ ರೈತರ ಆದಾಯ ಹೆಚ್ಚಿಸಲಿದೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

ವೈನ್ ಮದ್ಯವಲ್ಲ. ವೈನ್ ಮಾರಾಟ ಹೆಚ್ಚಾದರೆ ರೈತರಿಗೆ ಅದರಿಂದ ಲಾಭ ಸಿಗುತ್ತದೆ. ರೈತರ ಆದಾಯವನ್ನು ದ್ವಿಗುಣಗೊಳಿಸಲು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಸೂಪರ್ ಮಾರ್ಕೆಟ್‍ನಲ್ಲಿ ವೈನ್‍ಸ್ಟೋರ್ – ಮಹಾರಾಷ್ಟ್ರ ಸರ್ಕಾರದಿಂದ ಅನುಮತಿ

ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಕ್ಕಾಗಿ ಪ್ರತಿಪಕ್ಷ ಬಿಜೆಪಿ ವಿರುದ್ಧ ಸಂಜಯ್ ರಾವತ್ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕೇವಲ ಎಲ್ಲವನ್ನೂ ವಿರೋಧಿಸುತ್ತದೆ. ಅವರು ರೈತರಿಗಾಗಿ ಏನನ್ನೂ ಮಾಡುವುದಿಲ್ಲ ಎಂದು ಸಂಜಯ್ ರಾವತ್ ಟೀಕಿಸಿದ್ದಾರೆ. ಈ ಹಿಂದೆ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಶಿವಸೇನೆ ನೇತೃತ್ವದ ಸರ್ಕಾರ ಮಹಾರಾಷ್ಟ್ರವನ್ನು ಮದ್ಯ-ರಾಷ್ಟ್ರ ಮಾಡಲು ಹೊರಟಿದೆ ಎಂದು ಲೇವಡಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಂಜಯ್ ರಾವತ್ ವೈನ್ ಆಲ್ಕೋಹಾಲ್ ಅಲ್ಲ ಎಂದಿದ್ದಾರೆ.

ಸೂಪರ್ ಮಾರ್ಕೆಟ್‍ನಲ್ಲಿ ವೈನ್‍ಸ್ಟೋರ್- ಮಹಾರಾಷ್ಟ್ರ ಸರ್ಕಾರದಿಂದ ಅನುಮತಿ: ಸುಮಾರು 1,000 ಚದರ ಅಡಿ ಅಥವಾ ಅದಕ್ಕಿಂತ ಹೆಚ್ಚಿನ ವಿಸ್ತೀರ್ಣವನ್ನು ಹೊಂದಿರುವ ಮಹಾರಾಷ್ಟ್ರದ ಅಂಗಡಿಗಳು ಮತ್ತು ಸಂಸ್ಥೆಗಳ ಕಾಯ್ದೆಯಡಿ ನೋಂದಾಯಿಸಲ್ಪಟ್ಟಿರುವ ಸೂಪರ್ ರ್ಮಾರ್ಕೆಟ್‍ಗಳು ಮತ್ತು ಮಳಿಗೆಗಳಲ್ಲಿ “ಶೆಲ್ಫ್-ಇನ್-ಶಾಪ್” ವಿಧಾನವನ್ನು ಅಳವಡಿಸಿಕೊಳ್ಳಬಹುದಾಗಿದೆ. ಇದನ್ನೂ ಓದಿ: ಕೇರಳದ ಬಾಲಿಕಾ ಗೃಹದಿಂದ 6 ಹುಡುಗಿಯರು ನಾಪತ್ತೆ – ಒಬ್ಬಳು ಬೆಂಗ್ಳೂರಿನಲ್ಲಿ ಪತ್ತೆ

ಸೂಪರ್ ಮಾರ್ಕೆಟ್ ಸಮೀಪದಲ್ಲಿ ದೇವಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಿದ್ದರೆ ವೈನ್ ಮಾರಾಟ ಮಾಡಲು ಅನುಮತಿ ನೀಡಲಾಗುವುದಿಲ್ಲ ಮತ್ತು ಮದ್ಯ ನಿಷೇಧ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ಕೂಡ ವೈನ್ ಮಾರಾಟಕ್ಕೆ ಅನುಮತಿ ನೀಡಲಾಗುವುದಿಲ್ಲ. ಇನ್ನೂ ಸೂಪರ್ ಮಾರ್ಕೆಟ್‍ನಲ್ಲಿ ವೈನ್ ಮಾರಾಟ ಮಾಡಲು ಪರವಾನಗಾಗಿ 5,000 ರೂ. ಶುಲ್ಕವನ್ನು ಪಾವತಿಸಬೇಕಾಗುತ್ತದೆ.

Comments

Leave a Reply

Your email address will not be published. Required fields are marked *