ನಿಯಂತ್ರಣ ತಪ್ಪಿದ ಎಲೆಕ್ಟ್ರಿಕಲ್ ಬಸ್-6 ಮಂದಿ ಸಾವು, 12 ಜನರಿಗೆ ಗಾಯ

ಲಕ್ನೋ: ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಜನರ ಮೇಲೆ ಹರಿದಿದೆ. ಈ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರಲ್ಲಿ ನಡೆದಿದೆ.

ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿದೆ ಈ ವೇಳೆ ಮೂರು ಕಾರ್, ಹಲವು ಬೈಕ್ ಈ ಅಪಘಾತದಲ್ಲಿ ಜಖಂ ಆಗಿವೆ. ಇಷ್ಟೊಂದು ವೆಹಿಕಲ್‍ಗೆ ಗುದ್ದಿದ್ದು ಮಾತ್ರವಲ್ಲದೇ ಅಲ್ಲೆ ಪಕ್ಕದಲ್ಲಿ ಟ್ರಾಫಿಕ್ ಭೂತ್‍ಗೆ ನುಗ್ಗಿದೆ. ನಂತರ ಟ್ರಕ್‍ಗೆ ಗುದ್ದಿ ಬಸ್ ನಿಂತಿದೆ. 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳುಗಳನ್ನು ಅಲ್ಲಿಯೇ ಹತ್ತಿರದ ಆಸ್ಪತ್ರೆಗೆ ದಾಖಲಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ ಚಾಲಕನನ್ನು ಬಂಧಿಸಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾನ್ಪುರದ ಉಪ ಪೊಲೀಸ್ ಆಯುಕ್ತ ಪ್ರಮೋದ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ:  ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಡಿಕೆಶಿಯನ್ನು ಭೇಟಿಯಾದ ಆನಂದ್ ಸಿಂಗ್

ಕಾನ್ಪುರದ ಬಾಬುಪುರ್ವಾ ಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ. ಇದರಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪಗಳು. ಇದರೊಂದಿಗೆ ಈ ಅಪಘಾತದಲ್ಲಿ ಗಾಯಗೊಂಡಿರುವ ಎಲ್ಲರಿಗೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಫುಟ್‍ಪಾತ್ ಮೇಲೆ ಕಾರು ಚಾಲನೆ – ಅಪ್ರಾಪ್ತನ ಹುಚ್ಚಾಟಕ್ಕೆ ನಾಲ್ವರು ಬಲಿ

ಕಾನ್ಪುರದ ರಸ್ತೆ ಅಪಘಾತದ ದುರದೃಷ್ಟಕರ ಸುದ್ದಿ ಬಂದಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *