ಉಡುಪಿ: ಹಿಜಬ್ ಧರಿಸುವ ವಿಚಾರವಾಗಿ ಉಡುಪಿ ಮೂಲದ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿ ಹೈಕೋರ್ಟ್ ಮೆಟ್ಟಿಲೇರಿ ಕೋರ್ಟ್‍ಗೆ ರಿಟ್ ಅರ್ಜಿ ಸಲ್ಲಿಸಿದ್ದಾಳೆ.
ರಿಟ್ ಅರ್ಜಿಯಲ್ಲಿ ಏನಿದೆ?: ಹಿಜಬ್ ಧರಿಸುವುದು ಮೂಲಭೂತ ಹಕ್ಕಾಗಿದೆ. ಸಂವಿಧಾನದಡಿ ಧಾರ್ಮಿಕ ಹಕ್ಕುಗಳನ್ನು ನಮಗೆ ನೀಡಲಾಗಿದೆ. ಆದರೆ ಹಿಜಬ್ ಧರಿಸಲು ಕಾಲೇಜು ಅನುಮತಿ ನೀಡುತ್ತಿಲ್ಲ. ಹೀಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೋರ್ಟ್ ಬಳಿ ಮನವಿ ಮಾಡಿ ವಿದ್ಯಾರ್ಥಿನಿ ರಿಟ್ ಅರ್ಜಿ ಸಲ್ಲಿಸಿದ್ದಾಳೆ. ಇದನ್ನೂ ಓದಿ: ಸಮವಸ್ತ್ರದಲ್ಲಿ ಕಾಲೇಜಿಗೆ ಬರಲು ನಾಳೆ ಒಂದು ದಿನ ಅವಕಾಶ: ರಘುಪತಿ ಭಟ್ ಎಚ್ಚರಿಕೆ
ನಡೆದಿದ್ದೇನು?: ಉಡುಪಿಯ ಮಹಿಳಾ ಸರ್ಕಾರಿ ಪಿಯು ಕಾಲೇಜಿನ ಐವರು ವಿದ್ಯಾರ್ಥಿನಿಯರು ಹಿಜಬ್‍ಗಾಗಿ ಹೋರಾಟ ನಡೆಸುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜಿನಲ್ಲಿ ಸಭೆ ನಡೆಸಲಾಯಿತು. ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕಾಲೇಜಿನಲ್ಲಿ ಮೀಟಿಂಗ್ ನಡೆದಿದ್ದು, ಈ ವೇಳೆ ವಿದ್ಯಾರ್ಥಿನಿಯರು ಅವರ ಪೋಷಕರು ಕಾಲೇಜಿನ ಆಡಳಿತ ಮಂಡಳಿ ಡಿಡಿಪಿಯು ಭಾಗಿಯಾಗಿದ್ದರು. ಇದನ್ನೂ ಓದಿ: ಆರ್ಥಿಕ ಲಾಭಕ್ಕಾಗಿ ಮದ್ಯ ಮಾರಾಟಕ್ಕೆ ಆದ್ಯತೆ ನೀಡುತ್ತಿರುವುದು ದುರದೃಷ್ಟಕರ: ಅಣ್ಣಾ ಹಜಾರೆ

ಐವರು ಹಿಜಬ್ ಹೋರಾಟಗಾರ್ತಿಯರ ಪೈಕಿ ನಾಲ್ವರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ಹಂತದಲ್ಲಿ ಹಿಜಬ್‍ಗೆ ಅನುಮತಿ ಕೊಡಲು ಸಾಧ್ಯವಿಲ್ಲ. ಸರ್ಕಾರ, ಸಮಿತಿ ತೀರ್ಮಾನ ಮಾಡಿದಂತೆ ಸಮವಸ್ತ್ರದಲ್ಲಿ ಕಾಲೇಜಿಗೆ ಬರಬೇಕು ಎಂದು ಎಲ್ಲ ವಿಚಾರಗಳನ್ನು ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಗಿದೆ. ತರಗತಿಯಲ್ಲಿ ಹಿಜಬ್ ಧರಿಸಿ ಪಾಠ ಕೇಳುವ ಅವಕಾಶವಿಲ್ಲ. ಮನೆಯ ಪುರುಷರ ಜೊತೆ ಮಾತನಾಡಿ, ಇಂದು ತೀರ್ಮಾನ ತೆಗೆದುಕೊಳ್ಳುವುದಾಗಿ ಪೋಷಕರು ಹೇಳಿದ್ದಾರೆ.

ಹಿಜಬ್ ತೆಗೆದು ಕ್ಲಾಸಿಗೆ ಬರುವುದಾದರೆ ನಾಳೆಯಿಂದ ಬನ್ನಿ. ನಾಳೆಯಿಂದ ಯಾವುದೇ ಕಾಲೇಜು ಆವರಣದಲ್ಲಿ ಗೊಂದಲ ನಿರ್ಮಾಣಕ್ಕೆ ಅವಕಾಶವಿಲ್ಲ. ಮಾಧ್ಯಮ, ಸಂಘಸಂಸ್ಥೆ, ಸಂಘಟನೆಗೆ ಪ್ರವೇಶ ಇಲ್ಲ. ಎರಡು ತಿಂಗಳಲ್ಲಿ ಪರೀಕ್ಷೆಗಳು ಆರಂಭವಾಗಲಿದೆ. ಕಾಲೇಜಿನ ಬೇರೆ ಮಕ್ಕಳು ಮತ್ತು ಪೋಷಕರಿಂದ ದೂರುಗಳು ಬಂದಿವೆ. ಮನವಿ ಕೊಡುವುದಿದ್ದರೆ ಕಾಲೇಜಿಗೆ, ಡಿಸಿಗೆ ಕೊಡಿ. ಹೊರಗಿನಿಂದ ಯಾರೂ ಕಾಲೇಜ್ ಕ್ಯಾಂಪಸ್‍ಗೆ ಬರುವಂತಿಲ್ಲ. ಶಿಸ್ತು ಪಾಲಿಸುವವರು ಕಾಲೇಜಿಗೆ ಬರಬಹುದು. ಇನ್ನು ಮುಂದೆ ಗೊಂದಲಕ್ಕೆ ಅವಕಾಶವಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಆದರೆ ಹಿಜಬ್ ವಿಚಾರವಾಗಿ ವಿದ್ಯಾರ್ಥಿನಿಯೊಬ್ಬಳು ಕೋರ್ಟ್ ಮೆಟ್ಟಿಲೆರಿದ್ದಾಳೆ.

Leave a Reply