ಹಿಜಬ್‍ ಹೆಸರಿನಲ್ಲಿ ವಿದ್ಯಾರ್ಥಿನಿಯರ ಶೈಕ್ಷಣಿಕ ಭವಿಷ್ಯ ಕಸಿದುಕೊಳ್ಳುತ್ತಿದ್ದೇವೆ: ರಾಗಾ

RAHULGANDHI

ನವದೆಹಲಿ: ಉಡುಪಿ ಕಾಲೇಜಿನಲ್ಲಿ ನಡೆದ ಹಿಜಬ್ ವಿವಾದದ ಕುರಿತು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ವಿದ್ಯಾರ್ಥಿನಿಯರ ಶಿಕ್ಷಣದ ಭವಿಷ್ಯವನ್ನು ಕಸಿದುಕೊಳ್ಳುತ್ತಿದೆ ಎಂದು ಕಿಡಿಕಾರಿದರು.

ಟ್ವೀಟ್‍ನಲ್ಲಿ ಏನಿದೆ?: ಹಿಜಬ್ ಹೆಸರಿನಲ್ಲಿ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಅಡ್ಡಿ ಮಾಡುವ ಮೂಲಕ ನಾವು ಅವರ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ. ಸರಸ್ವತಿಯು ಎಲ್ಲರಿಗೂ ಜ್ಞಾನವನ್ನು ನೀಡುತ್ತಾಳೆ. ಆಕೆ ಭಿನ್ನಾಭಿಪ್ರಾಯ ತೋರುವುದಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಘಟನೆಯೇನು?: ಉಡುಪಿ ಜಿಲ್ಲೆಯಲ್ಲಿ ಕೆಲ ವಿದ್ಯಾರ್ಥಿನಿಯರು ಹಿಜಬ್ ಧರಿಸಿ ತರಗತಿಗೆ ಬಂದಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ತರಗತಿಗೆ ವಿದ್ಯಾರ್ಥಿಗಳು ಸಮವಸ್ತ್ರದಲ್ಲೆ ಬರಬೇಕು ಎಂದು ಸರ್ಕಾರ ಆದೇಶ ನೀಡಿದೆ. ಆದರೆ ಇದಕ್ಕೆ ವಿದ್ಯಾರ್ಥಿನಿಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಹಿಜಬ್ ವಿವಾದ ಕರಾವಳಿ ಜಿಲ್ಲೆಗಳಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಉಡುಪಿಯಲ್ಲಿ ವಿದ್ಯಾರ್ಥಿನಿಯರು ಸರ್ಕಾರಿ ಕಾಲೇಜಿನ ಹೊರಭಾಗ ನಿಂತು ಪ್ರತಿಭಟನೆ ನಡೆಸಿದ್ದಾರೆ. ಕರಾವಳಿ ಹೊರತು ಪಡಿಸಿ ಇದೀಗ ಇತರ ಜಿಲ್ಲೆಗಳಿಗೂ ಹಿಜಬ್ ವಿವಾದ ವ್ಯಾಪಿಸಿದೆ. ಮೈಸೂರಿನಲ್ಲಿ ಹಿಜಬ್ ಧರಿಸಲು ಅವಕಾಶ ಮಾಡಿಕೊಡುವಂತೆ ಪ್ರತಿಭಟನೆ ನಡೆದಿದೆ. ಇದನ್ನೂ ಓದಿ: ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ  ಇಬ್ರಾಹಿಂ ಸುತಾರ ನಿಧನ

ಈ ಎಲ್ಲಾ ಘಟನೆಗಳ ನಡುವೆ ಹಿಜಬ್ ವಿವಾದದ ಪ್ರಕರಣವು ಹೈಕೋರ್ಟ್‍ನಲ್ಲಿದೆ. ತೀರ್ಪು ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ. ಫೆ.8 ರಂದು ಹೈಕೋರ್ಟ್‍ನಿಂದ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಇದನ್ನೂ ಓದಿ: ಮುಂಬೈ ಸರಣಿ ಸ್ಫೋಟ ಪ್ರಕರಣದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅರೆಸ್ಟ್

Comments

Leave a Reply

Your email address will not be published. Required fields are marked *