ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ: ಸುನಿಲ್ ಕುಮಾರ್

sunil kumar

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ ಎಂದು ಸಚಿವ ಸುನಿಲ್ ಕುಮಾರ್ ವ್ಯಂಗ್ಯವಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ಹಾಗೂ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಏನು ಮಾಡುವುದಕ್ಕೆ ಹೊರಟಿದ್ದೀರಿ. ತಿಲಕ ಇಟ್ಟುಕೊಂಡು ಬಂದವರನ್ನು ಕಾಂಗ್ರೆಸ್ ನಾಯಕರು ವಿರೋಧ ಮಾಡುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ಟರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ. ರಾಷ್ಟ್ರ ಧ್ವಜ ಇಳಿಸಿದರು ಎಂಬ ಸುಳ್ಳನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷರೇ ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಹಿಜಬ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದ ಆದೇಶವನ್ನು ನಿರೀಕ್ಷೆ ಮಾಡುತ್ತಿದ್ದೇವೆ. ಎಲ್ಲರೂ ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು. ಯಾವತ್ತೂ ನಾವು ನೆಲದ ಕಾನೂನು ಗೌರವಿಸುತ್ತೇವೆ. ಕಾಯ್ದೆ ಅನುಷ್ಠಾನಕ್ಕೆ ತರುವ ಕೆಲಸ ಆಗಬೇಕು. ವಿದ್ಯಾರ್ಥಿಗಳು ಸಮವಸ್ತ್ರ ಸಂಹಿತೆ ಎಲ್ಲರೂ ಪಾಲಿಸಿಬೇಕು ಎಂದ ಅವರು, ಕಾಂಗ್ರೆಸ್ ದ್ವೇಷವನ್ನು ಹಚ್ಚುವ ಕೆಲಸ ಮಾಡುತ್ತದೆ. ದೇಶ ವಿಭಜನೆಗೆ ಕಾಂಗ್ರೆಸ್ ಬೆಂಬಲಿಸುತ್ತಿದೆ. ಯಾರು ಪ್ರತ್ಯೇಕವಾಗಿರಬೇಕು ಎಂದು ಬಯಸುತ್ತಿದ್ದಾರೋ ಅವರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ಕಿಡಿಕಾರಿದರು. ದನ್ನೂ ಓದಿ: ಭಾರತೀಯ ಮೂಲದ ವ್ಯಕ್ತಿಗೆ ಸಿಂಗಾಪುರದಲ್ಲಿ 6 ತಿಂಗಳು ಜೈಲು!

ಕಾಲೇಜಿನಲ್ಲಿ ಈ ರೀತಿಯ ಭಾವನೆ ಸೃಷ್ಟಿ ಮಾಡುವುದಕ್ಕೆ ಯಾರು ಕಾರಣ? ಪ್ರತ್ಯೇಕವಾದವನ್ನು ಕೇಳುವವರಿಗೆ ಯಾರು ಬೆಂಬಲಿಸುತ್ತಾದ್ದಾರೆ? ಇದೊಂದು ವ್ಯವಸ್ಥಿತವಾದ ಪಿತೂರಿಯಾಗಿದೆ. ಸರ್ಕಾರಿ ಶಾಲೆಗೆ ಶುಲ್ಕವನ್ನು ಕಟ್ಟಲು ಆಗದವರಿಗೆ ಕೋರ್ಟ್ ಮೆಟ್ಟಿಲು ಹತ್ತುವುದಕ್ಕೆ ಯಾರು ಬೆಂಬಲ ಕೊಟ್ಟರು. ಇದೊಂದು ರಾಜಕೀಯ ಪಿತೂರಿಯಾಗಿದೆ. ಎಸ್‍ಡಿಪಿಐ ಒಂದು ರಾಜಕೀಯ ಪಕ್ಷ. ಮಂಗಳೂರಲ್ಲಿ ಪಿಎಫ್‍ಐ ಎಸ್‍ಡಿಪಿಐ ಜೊತೆ ಒಳ ಒಪ್ಪಂದ ಮಾಡಿಕೊಂಡವರು ಕಾಂಗ್ರೆಸ್‍ನವರೇ ಎಂದು ಕಿಡಿಕಾರಿದರು. ದನ್ನೂ ಓದಿ: ಬಿಕಿನಿ, ಜೀನ್ಸ್, ಹಿಜಬ್ ಹೀಗೆ ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು : ಪ್ರಿಯಾಂಕಾ ಗಾಂಧಿ

Comments

Leave a Reply

Your email address will not be published. Required fields are marked *