ಶಿಕ್ಷಣ ಸಂಸ್ಥೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಭಟನೆಗೆ ನಿಷೇಧ: ಕಮಲ್ ಪಂತ್

ಬೆಂಗಳೂರು: ಶಾಲಾ ಕಾಲೇಜ್, ಶಿಕ್ಷಣ ಸಂಸ್ಥೆಗಳ ಗೇಟ್‍ನಿಂದ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಭೆ ಸಮಾರಂಭ, ಪ್ರತಿಭಟನೆ ಮಾಡದಂತೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇ ದಿನೇ ಕಾಲೇಜುಗಳಲ್ಲಿ ಹಿಜಬ್ ಹಾಗೂ ಕೇಸರಿ ಶಾಲು ಗಲಾಟೆ ಹೆಚ್ಚುತ್ತಿರುವುದರ ಹಿನ್ನೆಲೆಯಲ್ಲಿ ಎರಡು ವಾರಗಳ ಕಾಲ ಈ ಮಹತ್ವದ ಆದೇಶ ಹೊರಡಿಸಲಾಗಿದೆ. ಬೆಂಗಳೂರು ನಗರದ ಶಾಲೆಗಳು, ಪಿಯು ಕಾಲೇಜುಗಳು, ಪದವಿ ಕಾಲೇಜುಗಳಲ್ಲಿ ಈ ನಿಯಮ ಅನ್ವಯವಾಗುತ್ತದೆ ಎಂದು ತಿಳಿಸಿದರು.

ಶಿಕ್ಷಣ ಸಂಸ್ಥೆಗಳ ಗೇಟ್‍ನಿಂದ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಭೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಅಷ್ಟೇ ಅಲ್ಲದೇ ಆಂದೋಲನಗಳು ಅಥವಾ ಪ್ರತಿಭಟನೆಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಎರಡು ವಾರಗಳವರೆಗೆ ನಿಷೇಧಿಸಲಾಗಿದೆ ಎಂದು ಸೂಚನೆ ನೀಡಿದರು.  ಇದನ್ನೂ ಓದಿ: ನಾನು ಭಯ ಯಾಕೆ ಪಡಬೇಕು, ಧರ್ಮ ಪಾಲನೆ ಮಾಡಿದ್ದೇನೆ: ಮಂಡ್ಯ ವಿದ್ಯಾರ್ಥಿನಿ

Comments

Leave a Reply

Your email address will not be published. Required fields are marked *