ಸುಡುಗಾಡು ಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ: ಸೋಮಣ್ಣ

ಮೈಸೂರು: ಸುಡುಗಾಡು ಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ ಎಂದು ವಸತಿ ಸಚಿವ ವಿ. ಸೋಮಣ್ಣ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಕಾಲದಲ್ಲಿ ಬರೀ ಘೋಷಣೆ ಆಗಿತ್ತು. ಆದರೆ ನಾವು ಮನೆ ಕಟ್ಟಿಕೊಡುತ್ತಿದ್ದೇವೆ. ಇದು ನಿರಂತರ ಪ್ರಕ್ರಿಯೆಯಾಗಿದೆ. ರಾಜಕಾರಣಕ್ಕಾಗಿ ನನ್ನ ಮೇಲೆ ಆರೋಪ ಮಾಡಬೇಡಿ ಎಂದು ಬಿಜೆಪಿ ಸರ್ಕಾರ ಒಂದೂ ಮನೆ ನೀಡಿಲ್ಲ ಎಂಬ ಸಿದ್ದರಾಮಯ್ಯ ಆರೋಪ ವಿಚಾರಕ್ಕೆ ಟಾಂಗ್ ನೀಡಿದರು.

siddaramaiah

ನಾವು ಕೊಟ್ಟಿದ್ದು, ನೀವು ಕೊಟ್ಟಿದ್ದು ಅನ್ನುವುದಲ್ಲ. ಜನರಿಗೆ ಮನೆ ಸಿಗಬೇಕು. ಸಿದ್ದರಾಮಯ್ಯ ಸಹ ಮನೆಯಿಂದ ತಂದು ಕೊಟ್ಟಿಲ್ಲ. ನಾನು ಸಹ ಮನೆಯಿಂದ ತಂದು ಕೊಡಲ್ಲ. ಇನ್ನು ಮುಂದೆಯಾದರೂ ಸೋಮಣ್ಣನನ್ನು ಟಾರ್ಗೆಟ್ ಮಾಡಿವುದನ್ನು ಬಿಡಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಿಜಬ್ ವಿವಾದ ಕಂಡ ರಾಜ್ಯಗಳು – ಅಲ್ಲಿನ ಹೈಕೋರ್ಟ್‌ಗಳ ತೀರ್ಪುಗಳೇನು? ಇಲ್ಲಿದೆ ಮಾಹಿತಿ

ಹಿಜಾಬ್ ಕೇಸರಿ ಪ್ರಕರಣ ವಿವಾದಕ್ಕೆ ಸಂಬಂಧಿಸಿ ಸಂಘಟನೆಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಯಾರು ಯಾರು ಏನ್ ಮಾಡುತ್ತಿದ್ದಾರೆ ಎನ್ನುವುದನ್ನು ಸರ್ಕಾರ ಗಂಭೀರವಾಗಿ ಗಮನಿಸುತ್ತಿದೆ. ಇಲ್ಲಿ ಯಾರು ದೊಡ್ಡವರಲ್ಲ, ಎಲ್ಲರಿಗಿಂತ ದೊಡ್ಡದು ದೇಶವಾಗಿದೆ. ಸಮಾಜದ ಸ್ವಾಸ್ಥ್ಯ ಹಾಳು ಮಾಡುವಂತಹ ಸಂಘಟನೆಗಳನ್ನು ಬಗ್ಗು ಬಡಿಯುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ತಿಳಿಸಿದರು.

ಘಜಿನಿ ಮಹಮ್ಮದ್ 17 ಬಾರಿ ದಂಡೆತ್ತಿ ಬಂದ. ಅನೇಕ ರಾಜರು ದಾಳಿ ಮಾಡಿದರು. ಆದರೂ ಭಾರತ ಭಾರತವಾಗಿಯೇ ಇದೆ. ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡದಿರಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಆಕಾಶದಲ್ಲಿ ಹಾರಾಡಿತು ಪೈಲಟ್ ರಹಿತ ಹೆಲಿಕಾಪ್ಟರ್

Comments

Leave a Reply

Your email address will not be published. Required fields are marked *