ರಸ್ತೆ ನಿರ್ಮಾಣಕ್ಕೆ ರೈತರ ಭೂಮಿ ಸ್ವಾಧೀನ – ಪರಿಹಾರ ನೀಡದ ಅಧಿಕಾರಿಗಳ ವಿರುದ್ಧ ಆಕ್ರೋಶ

ಬೆಂಗಳೂರು: ದೇವರಾಜ್ ಅರಸು ಟ್ರಕ್ ಟರ್ಮಿನಲ್‌ಗೆ ಸಂಪರ್ಕ ಕಲ್ಪಿಸಲು ರಸ್ತೆ ನಿರ್ಮಾಣಕ್ಕಾಗಿ ಭೂ ಸ್ವಾಧಿನ ಪಡಿಸಿಕೊಂಡ ಸರ್ಕಾರ ರೈತರಿಗೆ ಪರಿಹಾರ ವಿತರಣೆ ಮಾಡಿಲ್ಲ ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ.

ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ದಾಸನಪುರ ಗ್ರಾಮದಲ್ಲಿ ರೈತರು ಸಿಡಿದೆದ್ದಿದ್ದಾರೆ. 2012ರಲ್ಲಿ ದೇವರಾಜ್ ಅರಸು ಟ್ರಕ್ ಟರ್ಮಿನಲ್‌ಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಗ್ರಾಮದ ರೈತರ ಕೆಲ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿದ್ದರು. ಆದರೆ ಇದುವರೆಗೂ ಯಾವುದೇ ಪರಿಹಾರ ನೀಡದೆ ಗುರುವಾರ ಭೂ ಸ್ವಾಧೀನ ಅಧಿಕಾರಿಗಳು ಆಗಮಿಸಿ ಸ್ಥಳ ವೀಕ್ಷಣೆ ಮಾಡಿದ್ದಾರೆ. ಇದರಿಂದ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ತಾಕತ್ತಿದ್ದರೆ ನನ್ನನ್ನು ತುಂಡು, ತುಂಡು ಮಾಡಲಿ ನೋಡೋಣ: ಆಂದೋಲಾ ಶ್ರೀ ಕಿಡಿ

ಭೂ ಸ್ವಾಧೀನ ಅಧಿಕಾರಿಗಳು ರೈತರಿಗೆ ಯಾವುದೇ ಮಾಹಿತಿ ನೀಡದೆ ಭೂಮಿ ಸರ್ವೆಗೆ ಏಕಾಏಕಿ ಪೊಲೀಸರ ಜೊತೆಗೆ ಆಗಮಿಸಿದ್ದಾರೆ. ಇದರಿಂದ ರೈತರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ.

2012ರಲ್ಲಿ ಸ್ವಾಧೀನ ಪಡೆದುಕೊಂಡು ಪರಿಹಾರ ನೀಡದೆ ಸತಾಯಿಸುತ್ತಿದ್ದಾರೆ. ಸುಪ್ರಿಂ ಕೋರ್ಟ್ ಆದೇಶದಂತೆ 1:3 ಹಣವನ್ನು ಪರಿಹಾರವಾಗಿ ನೀಡಬೇಕು. ಆದರೆ ಇಲ್ಲಿ ಕೆಲ ಸ್ಥಳೀಯ ಏಜೆಂಟ್ ಜೊತೆಗೆ ಅಧಿಕಾರಿಗಳು ಶಾಮೀಲಾಗಿರುವುದರಿಂದ ಯಾವುದೇ ಪರಿಹಾರ ನೀಡುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಇದನ್ನೂ ಓದಿ: ಸ್ಥಳೀಯರಿಗೆ ಖಾಸಗಿ ವಲಯದಲ್ಲಿ ಶೇ.75ರಷ್ಟು ಉದ್ಯೋಗವಕಾಶ – ಸುಪ್ರೀಂನಲ್ಲಿ ಹರ್ಯಾಣಕ್ಕೆ ಜಯ

ಇದೀಗ ರೈತರು ಸೂಕ್ತ ಪರಿಹಾರ ನೀಡಿ ನಂತರ ಭೂಮಿ ಸ್ವಾಧೀನ ಪಡಿಸಿಕೊಳ್ಳುವಂತೆ ಆಗ್ರಹಿಸಿದ್ದಾರೆ.

Comments

Leave a Reply

Your email address will not be published. Required fields are marked *