ಉಕ್ರೇನ್ ನಲ್ಲಿ ಸಿಲುಕಿಕೊಂಡ ನಟಿ ಶ್ವೇತಾ ಚೆಂಗಪ್ಪ ಗೆಳತಿ

ಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ದೇಶದ ನಾನಾ ಭಾಗಗಳ ತಲ್ಲಣಕ್ಕೆ ಕಾರಣವಾಗಿದೆ. ಉಕ್ರೇನ್ ನಲ್ಲಿ ವಾಸವಿರುವ ಭಾರತೀಯರೂ ಸೇರಿದಂತೆ ಅನೇಕ ರಾಷ್ಟ್ರಗಳ ಜನರು ಜೀವ ಹಿಡಿದುಕೊಂಡು ತವರಿಗೆ ಮರಳಲು ಕಾಯುತ್ತಿದ್ದಾರೆ. ತಮ್ಮವರು ಸುರಕ್ಷಿತವಾಗಿ ಮನೆಗೆ ವಾಪಸ್ಸಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಇಂಥದ್ದೊಂದು ಪ್ರಾರ್ಥನೆಯನ್ನು ಬಿಗ್ ಬಾಸ್ ಖ್ಯಾತಿಯ, ಕಿರುತೆರೆ ನಟಿ ಶ್ವೇತಾ ಚೆಂಗಪ್ಪ ಕೂಡ ಮಾಡಿದ್ದಾರೆ. ಇದನ್ನೂ ಓದಿ : ಧ್ರುವ ಸರ್ಜಾ ಅಂಡರ್ ವರ್ಲ್ಡ್ ಡಾನ್

ಕನ್ನಡ ಕಿರುತೆರೆ ನಟಿ ಶ್ವೇತಾ ಚೆಂಗಪ್ಪ ಸ್ನೇಹಿತೆ ಸುಹಾನಿ ದಿವ್ಯ ಗಿರೀಶ್ ಉಕ್ರೇನ್ ನಲ್ಲಿ ಸಿಲುಕಿಕೊಂಡಿದ್ದಾರೆ. ಕೆಲವು ತಿಂಗಳ ಹಿಂದೆ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಉಕ್ರೇನ್ ಗೆ ಹೋದವರು ಯುದ್ಧದ ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದಾರಂತೆ. ಉಕ್ರೇನ್ ನಲ್ಲಿ ತಮ್ಮ ಗೆಳತಿ ಹೇಗಿದ್ದಾರೋ ಏನೋ ಎನ್ನುವ ಆತಂಕವನ್ನು ಶ್ವೇತಾ, ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ : ಖ್ಯಾತ ಗಾಯಕ ರಘು ದೀಕ್ಷಿತ್ ತಾಯಿ ನಿಧನ : ದುಬೈನಲ್ಲಿದ್ದಾರೆ ರಘು

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಶುರುವಾದಾಗ ನನಗೆ ತಕ್ಷಣವೇ ನೆನಪಾಗಿದ್ದು, ಗೆಳತಿ ಸುಹಾನಿ ಮತ್ತು ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳು. ಅವರ ರಕ್ಷಣೆಗೆ ಕೂಡಲೇ ಭಾರತ ಸರ್ಕಾರ ಕ್ರಮ ತಗೆದುಕೊಳ್ಳಬೇಕು. ಎಲ್ಲ ವಿಮಾನಗಳನ್ನು ರದ್ದುಗೊಳಿಸಿದ್ದರಿಂದ, ಅಲ್ಲಿರುವ ಭಾರತೀಯರಿಗೆ ಧೈರ್ಯ ಹೇಳುವ ಕೆಲಸ ಆಗಬೇಕು ಎಂದಿದ್ದಾರೆ ಶ್ವೇತಾ. ಇದನ್ನೂ ಓದಿ : ಅಶರೀರವಾಣಿ ಆಲ್ಬಂಗೆ ನೀನಾಸಂ ಸತೀಶ್ ಸಿಂಗರ್ : ಮಗಳೊಂದಿಗೆ ಹಾಡಿದ ಸ್ಟಾರ್ ನಟ

ಯುದ್ಧ ಶುರುವಾದಾಗಿನಿಂದ ತಮಗೆ ಯಾವ ಕೆಲಸದಲ್ಲೂ ಆಸಕ್ತಿ ಕಾಣುತ್ತಿಲ್ಲ ಎಂದಿರುವ ಅವರು, ಎಲ್ಲರೂ ನನ್ನ ಗೆಳತಿಯ ಸುರಕ್ಷತೆಗಾಗಿ ಪ್ರಾರ್ಥಿಸಿ ಅಂದಿದ್ದಾರೆ. ಅವರ ಕುಟುಂಬಕ್ಕೂ ಕೂಡ ಧೈರ್ಯ ತುಂಬುವ ಕೆಲಸ ಆಗಲಿ ಎಂದು ಶ್ವೇತಾ ಬರೆದುಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *