ಕಮಲ್ ಪುತ್ರಿ ಶ್ರುತಿ ಹಾಸನ್‍ಗೆ ಕೊರೊನಾ ಪಾಸಿಟಿವ್

ಚೆನ್ನೈ: ಕಾಲಿವುಡ್ ನಟ ಕಮಲ್ ಹಾಸನ್ ಪುತ್ರಿ ನಟಿ ಶ್ರುತಿ ಹಾಸನ್‍ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಶ್ರುತಿ ಹಾಸನ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಶ್ರುತಿ ಹಾಸನ್ ಅವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಎಲ್ಲರಿಗೂ ನಮಸ್ಕಾರ. ನನಗೆ ಕೊರೊನಾ ಪಾಸಿಟಿವ್ ಬಂದಿದ್ದು, ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇನೆ ಮತ್ತು ಚೇತರಿಸಿಕೊಳ್ಳುತ್ತಿದ್ದೇನೆ. ಕಾಯಲು ಸಾಧ್ಯವಿಲ್ಲ ಶೀಘ್ರದಲ್ಲಿಯೇ ಕೆಲಸಕ್ಕೆ ಮರಳುತ್ತೇನೆ. ನಿಮ್ಮೆಲ್ಲರನ್ನು ಭೇಟಿಯಾಗುತ್ತೇನೆ ಧನ್ಯವಾದಗಳು ಎಂದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನ ಅನಾಥಾಶ್ರಮಗಳ ಮೇಲೆ ರಷ್ಯಾ ದಾಳಿ- ಬಾಲಕಿ ಸೇರಿ 6 ಮಂದಿ ಸಾವು

 

View this post on Instagram

 

A post shared by Shruti Haasan (@shrutzhaasan)

ಶ್ರುತಿ ಹಾಸನ್ ಕೊನೆಯದಾಗಿ ಅಮೆಜಾನ್ ಪ್ರೈಮ್‍ನಲ್ಲಿ ಬಿಡುಗೆಡೆಗೊಂಡಿದ್ದ ಬೆಸ್ಟ್ ಸೆಲ್ಲರ್ ವೆಬ್ ಸರಣಿಯಲ್ಲಿ ಕಾಣಿಸಿಕೊಂಡಿದ್ದರು. ಇದರಲ್ಲಿ ಮಿಥುನ್ ಚಕ್ರವರ್ತಿ, ಶ್ರುತಿ ಹಾಸನ್, ಅರ್ಜನ್ ಬಾಜ್ವಾ, ಗೌಹರ್ ಖಾನ್, ಸತ್ಯಜೀತ್ ದುಬೆ ಮತ್ತು ಸೋನಾಲಿ ಕುಲಕರ್ಣಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಇದೀಗ ಶ್ರುತಿ ಹಾಸನ್ ಪ್ರಭಾಸ್ ಜೊತೆ ಸಲಾರ್ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರಕ್ಕೆ ನಿರ್ದೇಶಕ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅಲ್ಲದೇ ಈ ಸಿನಿಮಾದಲ್ಲಿ ಜಗಪತಿ ಬಾಪು ಕೂಡ ಅಭಿನಯಿಸಿದ್ದಾರೆ. ಮತ್ತೊಂದೆಡೆ ನಿರ್ದೇಶಕ ಗೋಪಿಚಂದ್ ಮಲಿನೇನಿ ಅವರು ನಿರ್ದೇಶಿಸುತ್ತಿರುವ ಹೊಸ ಸಿನಿಮಾದಲ್ಲಿ ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ ಅವರೊಂದಿಗೆ ಶ್ರುತಿ ಹಾಸನ್ ಸ್ಕ್ರೀನ್ ಶೇರ್ ಮಾಡಲಿದ್ದಾರೆ.  ಇದನ್ನೂ ಓದಿ: ಯುದ್ಧಪೀಡಿತ ಉಕ್ರೇನ್‍ನಿಂದ ಗ್ರೌಂಡ್ ರಿಪೋರ್ಟ್ ಮಾಡಿದ ವಿದ್ಯಾರ್ಥಿಗಳು

Comments

Leave a Reply

Your email address will not be published. Required fields are marked *