ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್ ಪಡೆಗೆ ಸೇರಿದ ತಮಿಳುನಾಡಿನ ಯುವಕ

Sainikesh Ravichandran

ಚೆನ್ನೈ: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ 21 ವರ್ಷದ ಸಾಯಿನಿಕೇಶ್ ರವಿಚಂದ್ರನ್ ಎಂಬ ವಿದ್ಯಾರ್ಥಿ ರಷ್ಯಾದ ವಿರುದ್ಧ ಹೋರಾಡಲು ಉಕ್ರೇನ್‍ನಲ್ಲಿ ಅರೆಸೈನಿಕ ಪಡೆಯನ್ನು ಸೇರಿಕೊಂಡಿದ್ದಾರೆ.

ಸಾಯಿನಿಕೇಶ್ ರವಿಚಂದ್ರನ್ ಬಗ್ಗೆ ವಿಚಾರಿಸಲು ಅಧಿಕಾರಿಗಳು ಅವರ ನಿವಾಸಕ್ಕೆ ಭೇಟಿ ನೀಡಿದಾಗ ಭಾರತೀಯ ಸೇನೆಗೆ ಸೇರಲು ಸಾಯಿನಿಕೇಶ್ ರವಿಚಂದ್ರನ್ ಅರ್ಜಿ ಸಲ್ಲಿಸಿದ್ದರು. ಆದರೆ ತಿರಸ್ಕರಿಸಲಾಗಿತ್ತು ಎಂದು ಅವರ ಪೋಷಕರು ತಿಳಿಸಿದ್ದಾರೆ. ಇದನ್ನೂ ಓದಿ: ರೇಣುಕಾಚಾರ್ಯ, ಪ್ರತಾಪಸಿಂಹ ವಿರುದ್ಧದ 4 ಕೇಸ್‌ ವಾಪಸ್‌ ಪಡೆದ ಸರ್ಕಾರ- ಹೈಕೋರ್ಟ್‌ ಗರಂ

2018ರಲ್ಲಿ ಸೈನಿಕೇಶ್ ಖಾರ್ಕಿವ್‍ನಲ್ಲಿರುವ ನ್ಯಾಷನಲ್ ಏರೋಸ್ಪೇಸ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲು ಉಕ್ರೇನ್‍ಗೆ ತೆರಳಿದ್ದರು. ಜುಲೈ 2022ರೊಳಗೆ ಕೋರ್ಸ್ ಪೂರ್ಣಗೊಳಿಸಬೇಕಿತ್ತು. ಈ ನಡುವೆ ಉಕ್ರೇನ್‍ನಲ್ಲಿ ಯುದ್ಧ ಆರಂಭವಾಗಿದ್ದು, ಸಾಯಿನಿಕೇಶ್ ಜೊತೆಗೆ ಪೋಷಕರು ಸಂಪರ್ಕ ಕಳೆದುಕೊಂಡಿದ್ದಾರೆ. ಭಾರತೀಯ ರಾಯಭಾರ ಕಚೇರಿಗೆ ಮನವಿ ಮಾಡಿದ ನಂತರ ಸಾಯಿನಿಕೇಶ್ ರವಿಚಂದ್ರನ್ ಅವರನ್ನು ಸಂಪರ್ಕಿಸಲು ಸಾಧ್ಯವಾಯಿತು. ಈ ವೇಳೆ ರಷ್ಯಾದ ವಿರುದ್ಧ ಹೋರಾಡಲು ಉಕ್ರೇನಿಯನ್ ಅರೆಸೈನಿಕ ಪಡೆಯನ್ನು ಸೇರಿಕೊಂಡಿರುವುದಾಗಿ ತಮ್ಮ ಕುಟುಂಬಸ್ಥರಿಗೆ ತಿಳಿಸಿದರು.

Comments

Leave a Reply

Your email address will not be published. Required fields are marked *