ವಿಶ್ವ ಮಹಿಳಾ ದಿನಾಚರಣೆ – ನೆಲಮಂಗಲದಲ್ಲಿ ಉದ್ಯೋಗ ರಥಕ್ಕೆ ಚಾಲನೆ

ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಿಳೆಯರು ಹೆಚ್ಚು ನರೇಗಾ ಕಾಮಗಾರಿಗಳಲ್ಲಿ ಭಾಗವಹಿಸಲು ಉದ್ಯೋಗ ರಥದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ನೆಲಮಂಗಲ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ಕುಮಾರ್ ತಿಳಿಸಿದರು.

ನಗರದ ತಾಲೂಕು ಪಂಚಾಯ್ತಿ ಆವರಣದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ರಥದ ಪ್ರಚಾರ ವಾಹಿನಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನರೇಗಾದಲ್ಲಿ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳನ್ನು ಹೆಚ್ಚು ಹೆಚ್ಚು ಮಾಡುವ ಮೂಲಕ ಸಾರ್ವಜನಿಕರು ಲಾಭ ಮಾಡಿಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಏಕಾಂಗಿಯಾಗಿ ಉಕ್ರೇನ್ ಗಡಿಗೆ ಪ್ರಯಾಣಿಸಿದ 11 ವರ್ಷದ ಬಾಲಕ

 

ಮಹಿಳೆಯರು ನರೇಗಾ ಕಾಮಗಾರಿಯಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಪ್ರಚಾರ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ನರೇಗಾ ಕಾಮಗಾರಿಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದರು. ಇದನ್ನೂ ಓದಿ: ಬಿಹಾರ ವರನ ಕೈ ಹಿಡಿದ ಜರ್ಮನಿ ಮಹಿಳೆ

ಈ ಸಂದರ್ಭದಲ್ಲಿ ತಾಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕಿ ಗೀತಾಮಣಿ, ವ್ಯವಸ್ಥಾಪಕ ರಾಮಾನಾಯಕ್, ನರೇಗಾ ಸಿಬ್ಬಂದಿ ಹಾಗೂ ತಾಲೂಕು ಪಂಚಾಯ್ತಿಯ ವಿವಿಧ ಇಲಾಖಾ ಸಿಬ್ಬಂದಿಗಳು ಭಾಗವಹಿಸಿದ್ದರು.

Comments

Leave a Reply

Your email address will not be published. Required fields are marked *