ಸೂರ್ಯಕಾಂತಿ ಮಾತ್ರ ಅಲ್ಲ ಬೇರೆ ಖಾದ್ಯ ತೈಲ ಖರೀದಿಗೆ ಪರ್ಯಾಯ ಮಾರ್ಗಗಳ ಬಗ್ಗೆ ಚಿಂತನೆ: ನಿರ್ಮಲಾ ಸೀತಾರಾಮನ್

ಬೆಂಗಳೂರು: ಸೂರ್ಯಕಾಂತಿ ಮಾತ್ರ ಅಲ್ಲ ಬೇರೆ ಖಾದ್ಯ ತೈಲ ಖರೀದಿಗೆ ಪರ್ಯಾಯ ಮಾರ್ಗಗಳ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ಬಿಜೆಪಿ ಕಚೇರಿಯಲ್ಲಿ ನಗರದ ವಿವಿಧ ಮಾಧ್ಯಮಗಳ ಸಂಪಾದಕರ ಜೊತೆ ಸಂವಾದ ನಡೆಸಿದ ಅವರು, ಕಚ್ಚಾ ತೈಲ ಬೆಲೆಯನ್ನ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಈಗಾಗಲೇ ತೈಲ ಬೆಲೆ ವಿಚಾರವಾಗಿ ಪೆಟ್ರೋಲಿಯಂ ಸಚಿವರೊಂದಿಗೆ ಸಂಪರ್ಕದಲ್ಲಿದ್ದೇನೆ. ಬೇರೆ ಬೇರೆ ಮೂಲಗಳಿಂದ ಹೆಚ್ಚಾಗಿ ತೈಲ ಸಂಗ್ರಹಣೆಯನ್ನು ಮಾಡುವತ್ತ ಗಮನಹರಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ : ಮಹಿಳಾ ದಿನಾಚರಣೆಗಾಗಿ ವಿಶೇಷ ಪೋಸ್ಟರ್ ರಿಲೀಸ್ ಮಾಡಿದ ಕೆಜಿಎಫ್ 2 ತಂಡ

ಉಕ್ರೇನ್ ಯುದ್ಧದ ಆರಂಭಕ್ಕೂ ಮುನ್ನವೇ ತಾವು ತೈಲ ಬೆಲೆ ಏರಿಕೆಯ ಊಹೆ ಇತ್ತು. ಮುಂದಿನ ವರ್ಷಕ್ಕೆ ಕಚ್ಚಾ ತೈಲ ಬೆಲೆ ಎಷ್ಟಾಗಬಹುದು ಎಂಬುದನ್ನು ಮೊದಲೇ ಊಹೆ ಮಾಡಿದೆವು. ಆದರೆ ಈಗ ಕಚ್ಚಾ ತೈಲ ಬೆಲೆ ನಮ್ಮ ಊಹೆಯನ್ನ ಹೆಚ್ಚು ಮಾಡುತ್ತಿದೆ. ಕಚ್ಚಾ ತೈಲದ ಮೇಲೆ ಯುದ್ಧದ ಪರಿಣಾಮ ಆಧಾರದೊಂದಿಗೆ ನಾವು ಲೆಕ್ಕಾಚಾರ ಇಡುತಿದ್ದೆವು ಎಂದು ಹೇಳಿದರು. ಇದನ್ನೂ ಓದಿ: ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್ ಡೀಲ್ ಮಾಡ್ತಿದ್ದ ಬೆಂಗಳೂರಿನ ಲವರ್ಸ್ ಬಂಧನ

ಉಕ್ರೇನ್‍ನಿಂದ ಸೂರ್ಯಕಾಂತಿ ಎಣ್ಣೆ ಆಮದು ಮಾಡಿಕೊಳ್ಳುತ್ತಿದ್ದೇವೆ. ಆದರೆ ಈಗ ಯುದ್ಧದಿಂದಾಗಿ ಖಾದ್ಯ ತೈಲ ಪೂರೈಕೆಯಲ್ಲಿ ನಮ್ಮ ಮೇಲೆ ಪರಿಣಾಮ ಬೀರಬಹುದಾಗಿದೆ. ಹೀಗಾಗಿ ಪರ್ಯಾಯ ಮಾರ್ಗಗಳ ಬಗ್ಗೆಯೂ ಯೋಚಿಸಿದ್ದೇವೆ. ಸೂರ್ಯಕಾಂತಿ ಎಣ್ಣೆ ಅಷ್ಟೇ ಅಲ್ಲ ಬೇರೆ ಬೇರೆ ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳಲು ಗಮನಹರಿಸುತ್ತಿದ್ದೇವೆ. ಖಾದ್ಯ ತೈಲಗಳನ್ನು ತರಿಸಿಕೊಳ್ಳಲು ಬೇರೆ ಬೇರೆ ಭಾಗಗಳನ್ನ ನಾವು ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

Comments

Leave a Reply

Your email address will not be published. Required fields are marked *