ಪಿಕ್‍ಪಾಕೆಟ್ ಪ್ರಕರಣದಲ್ಲಿ ನಟಿ ಅರೆಸ್ಟ್

ಕೋಲ್ಕತ್ತಾ: ಬೆಂಗಾಳಿ, ಹಿಂದಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ರೂಪಾ ದತ್ತಾ, ಪಿಕ್‍ಪಾಕೆಟ್ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿದ್ದಾರೆ.

ನಡೆದಿದ್ದೇನು?: ಕೋಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಮೇಳದಲ್ಲಿ ಭಾಗವಹಿಸಿದ್ದರು. ಈ ವೇಳೆ ರೂಪಾ ದತ್ತಾ, ಪರ್ಸ್‍ವೊಂದನ್ನು ಕಸದ ಬುಟ್ಟಿಗೆ ಎಸೆಯುತ್ತಿರುವುದನ್ನು ಪೊಲೀಸರೊಬ್ಬರು ನೋಡಿದ ನಂತರ ಶನಿವಾರ ಅವರನ್ನು ಬಂಧಿಸಲಾಗಿದೆ ಎಂದು ಬಿದಾನ್ ನಗರ್ ಉತ್ತರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬಂಧನದ ನಂತರ ವಿಚಾರಣೆ ವೇಳೆಯಲ್ಲಿ ಆಕೆ ನೀಡಿದ್ದ ಉತ್ತರಗಳು ಸಮರ್ಪಕವಾಗಿರಲಿಲ್ಲ. ಶೋಧನೆ ವೇಳೆ ಆಕೆಯ ಬ್ಯಾಗ್‍ನಿಂದ ಅನೇಕ ಪರ್ಸ್‍ಗಳು ಮತ್ತು 75 ಸಾವಿರ ರೂ. ನಗದು ಪತ್ತೆಯಾಗಿದೆ. ಆದರೆ ಈ ಹಣದ ಮೂಲದ ಬಗ್ಗೆ ರೂಪಾ ಯಾವುದೇ ಖಚಿತ ಮಾಹಿತಿ ನೀಡಿಲ್ಲ. ಗಮನ ಬೇರೆಡೆ ಸೆಳೆದು ಕಳ್ಳತನ ಆರೋಪದ ಮೇರೆಗೆ ನಟಿಯನ್ನು ಬಂಧಿಸಲಾಗಿದೆ. ಈ ಅಪರಾಧದಲ್ಲಿ ಹೆಚ್ಚಿನ ಜನರು ತೊಡಗಿಸಿಕೊಂಡರಬಹುದೇ ಎಂಬುದನ್ನು ತಿಳಿಯಲು ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ‘ಜೇಮ್ಸ್’ ಜೊತೆ ‘ಬೈರಾಗಿ’ ಟೀಸರ್ – ಪುನೀತ್ ಹುಟ್ಟುಹಬ್ಬಕ್ಕೆ ಶಿವಣ್ಣನ ಝಲಕ್

ಪ್ರಸ್ತುತ ರೂಪಾ ದತ್ತಾಗೆ ಒಂದು ದಿನದ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸರು ವಶಪಡಿಸಿಕೊಂಡ ಬ್ಯಾಗ್ ತನ್ನದಲ್ಲ ಎಂದಿರುವ ನಟಿ, ಅದು ಡ‌ಸ್ಟ್‌ಬಿನ್‌ನಿಂದ  ಎತ್ತಿಕೊಂಡಿರುವ ಚೀಲ ಎಂದು ಹೇಳಿದ್ಧಾರೆ. ಇದನ್ನೂ ಓದಿ: ಭಾವುಕರಾಗಿ ಕಾರ್ಯಕ್ರಮ ಶುರು ಮಾಡಿದ ಅನುಶ್ರೀ

ಈ ಹಿಂದೆ ಅನುರಾಗ್ ಕಶ್ಯಪ್ ತಮಗೆ ಅನುಚಿತ ಸಂದೇಶ ಕಳುಹಿಸುತ್ತಿದ್ದಾರೆ ಎಂದು ನಟಿ ಆರೋಪಿಸಿದ್ದರು. ಕೆಲ ಕಾಲದ ನಂತರ ಅದು ನಿರ್ದೇಶಕ ಅನುರಾಗ್ ಕಶ್ಯಪ್ ಅಲ್ಲ, ಬೇರೆ ಅನುರಾಗ್ ಎನ್ನುವುದು ತಿಳಿದುಬಂದಿತ್ತು. ಇದೀಗ ಪಿಕ್ ಪಾಕೆಟ್ ಪ್ರಕರಣದಲ್ಲಿ ಪೊಲೀಸರ ಅಥಿತಿಯಾಗಿದ್ದಾರೆ.

Comments

Leave a Reply

Your email address will not be published. Required fields are marked *