ಪಠ್ಯಪುಸ್ತಕದಲ್ಲಿ ಪುನೀತ್ ಜೀವನ ಕಥನ

ಬೆಂಗಳೂರು: ಕರ್ನಾಟಕ ರತ್ನ ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಬದುಕಿನ ಕಥೆಯನ್ನು 4ನೇ ಅಥವಾ 5ನೇ ತರಗತಿಯ ಪಠ್ಯಪುಸ್ತಕದಲ್ಲಿ ಅಳವಡಿಸಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಧ್ಯಮಗಳೊಂದಿಗೆ ಮಾತನಾಡಿ, ‘ಪುನೀತ್ ಅವರ ಜೀವನ ಕಥನವನ್ನು ಪಠ್ಯಪುಸ್ತಕದಲ್ಲಿ ಅಳವಡಿಸುವಂತೆ ಅಭಿಮಾನಿಗಳು ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳ ಜತೆ ಮಾತನಾಡಿ ಮತ್ತು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿದ ಅಂತಿಮ ನಿರ್ಧಾರ ತಗೆದುಕೊಳ್ಳುತ್ತೇನೆ’ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ಸಂಭ್ರಮ ಹೆಚ್ಚಿಸಿದ್ದಾರೆ.

ಪುನೀತ್ ಕೇವಲ ಚಿತ್ರರಂಗದಲ್ಲಷ್ಟೇ ಅಲ್ಲ, ಸಾಮಾಜಿಕ ಸೇವೆಯಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಆರ್ಥಿಕವಾಗಿ ಹಿಂದುಳಿದ, ಅನಾಥ ಮಕ್ಕಳ ಶಿಕ್ಷಣ, ಆರ್ಥಿಕ ಸಹಾಯ ಸೇರಿದಂತೆ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ, ಅದರಿಂದ ಯಾವುದೇ ಫಲಾಪೇಕ್ಷೆ ನಿರೀಕ್ಷಿಸದೇ ಕರ್ನಾಟಕ ಜನತೆಯ ಮನೆ ಮನಗಳಲ್ಲಿ ನೆಲೆಸಿದ್ದಾರೆ. ಇಂತಹ ಕರುಣಾಮಯಿ ಇಂದು ನಮ್ಮೊಂದಿಗಿಲ್ಲವಾದರೂ ಅವರ ನೆನಪು, ಆದರ್ಶಗಳು ಮಕ್ಕಳಿಗೆ ತಿಳಿಯಬೇಕು ಎಂಬ ಉದ್ದೇಶದಿಂದ ಇದೀಗ ಸರ್ಕಾರ ಅವರ ಜೀವನ ಕಥಣವನ್ನು ಶಾಲಾ ಪಠ್ಯಪುಸ್ತಕದಲ್ಲಿ ಅಳವಡಿಸಲು ಚಿಂತನೆ ನಡೆಸಿದೆ. ಇದನ್ನೂ ಓದಿ: ಪುನೀತ್ ಹುಟ್ಟು ಹಬ್ಬಕ್ಕೆ ತಮಿಳು ನಟ ವಿಶಾಲ್ ಮೆಚ್ಚುಗೆ ಕೆಲಸ

ಪುನೀತ್ ಜೀವನಕಥನವನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಅಳವಡಿಸಬೇಕೆಂದು ಈಗಾಗಲೇ ಸರಕಾರಕ್ಕೆ ಅನೇಕ ಸಂಘ ಸಂಸ್ಥೆಗಳು ಬಿಬಿಎಂಪಿ ಶಿಕ್ಷಣ ವಿಭಾಗಕ್ಕೆ ಪತ್ರ ಬರೆದಿವೆ. ಕರ್ನಾಟಕದ ಹಲವೆಡೆಯಿಂದ ಇದೇ ರೀತಿಯಾಗಿ ಸರ್ಕಾರಕ್ಕೆ ಮನವಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು ಮಹತ್ವದ ಉತ್ತರವನ್ನೇ ನೀಡಿದ್ದಾರೆ. ಇದನ್ನೂ ಓದಿ: ಜೇಮ್ಸ್ ಸಿನಿಮಾ ನೋಡಿಲ್ಲ, ನೋಡ್ತೀನಿ: ಜ್ಯೂ.ಎನ್.ಟಿ.ಆರ್

 

Comments

Leave a Reply

Your email address will not be published. Required fields are marked *