ಸ್ಕೂಲ್ ಬಳಿ ಬಂದು ಸಮಸ್ಯೆ ಕ್ಲೀಯರ್ ಮಾಡಿ- ಠಾಣೆ ಮೆಟ್ಟಿಲೇರಿದ ಪುಟಾಣಿ

ಅಮರಾವತಿ: ಭಾರತದ ಬಹುತೇಕ ನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ಸರ್ವೇ ಸಾಮಾನ್ಯವಾಗಿದೆ. ಕೇವಲ ದೊಡ್ಡವರಿಗೆ ಮಾತ್ರವಲ್ಲದೆ ಶಾಲೆಗೆ ಹೋಗುವ ಪುಟ್ಟ ಮಕ್ಕಳು ಕೂಡ ಇದರಿಂದ ಕಿರಿಕಿರಿ ಅನುಭವಿಸುತ್ತಿದ್ದಾರೆ. ಅಂತೆಯೇ ಟ್ರಾಫಿಕ್ ಸಮಸ್ಯೆಯಿಂದ ಬೇಸತ್ತ 6 ವರ್ಷದ ಬಾಲಕನೊಬ್ಬ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡದ್ದಲ್ಲದೇ ಮನವಿ ಮಾಡಿಕೊಂಡ ಘಟನೆ ಆಂಧ್ರಪ್ರದೇಶದ ಚಿತ್ತೂರ್ ಜಿಲ್ಲೆಯಲ್ಲಿ ನಡೆದಿದೆ.

ಸದ್ಯ 6 ವರ್ಷದ ಬಾಲಕ ಪೊಲೀಸ್ ಠಾಣೆಗೆ ತೆರಳಿ ಪೊಲೀಸರನ್ನು ಪ್ರಶ್ನೆ ಮಾಡುತ್ತಿರುವ ವೀಡಿಯೋವನ್ನು ಇತರೆ ಪೊಲೀಸರು ಮಾಡಿಕೊಂಡಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಯುಕೆಜಿ ಓದುತ್ತಿರುವ ಪುಟ್ಟ ಬಾಲಕ ಕಾರ್ತಿಕ್, ಚಿತ್ತೂರ್ ಜಿಲ್ಲೆಯ ಪಾಲಮನೆರ್ ನಲ್ಲಿರುವ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾನೆ. ದೂರಿನಲ್ಲಿ, ತಾನು ಶಾಲೆಗೆ ತೆರಳುವ ರಸ್ತೆಯಲ್ಲಿ ಚರಂಡಿ ರಿಪೇರಿಗೆ ಅಗೆಯಲಾಗಿದೆ. ಅಲ್ಲದೆ ಟ್ರ್ಯಾಕ್ಟರ್ ಅಡ್ಡಾದಿಡ್ಡಿಯಾಗಿ ನಿಂತಿವೆ. ಇದರಿಂದ ನಮಗೆ ಶಾಲೆಗೆ ತೆರಳಲು ಕಿರಿಕಿರಿಯಾಗುತ್ತಿದೆ. ದಯಮಾಡಿ ಸ್ಕೂಲ್ ಹತ್ತಿರ ಬಂದು ಸಮಸ್ಯೆ ಪರಿಹರಿಸಿ ಕೊಡಿ ಎಂದು ಬಾಲಕ ಪಲಮನೇರ್ ಸರ್ಕಲ್ ಇನ್ಸ್ ಪೆಕ್ಟರ್ ಎನ್. ಭಾಸ್ಕರ್ ಅವರ ಬಳಿ ಮನವಿ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ರಾಜಕೀಯ ಪಕ್ಷಗಳು ಜನರ ನಡುವೆ ಒಡಕು ಮೂಡಿಸುತ್ತಿವೆ: ಗುಲಾಂ ನಾಬಿ ಅಜಾದ್

ಈ ವೇಳರ ಭಾಸ್ಕರ್ ಕೂಡ ಬಾಲಕನ ಮನವಿಗೆ ಸ್ಪಂಧಿಸಿದ್ದಾರೆ. ಶೀಘ್ರವೇ ರಸ್ತೆ ಸಮಸ್ಯೆ ಪರಿಹರಿಸಿ ಕೊಡುವುದಾಗಿ ಭರವಸೆ ನೀಡಿದರು. ಅಲ್ಲದೆ ಬಾಲಕನಿಗೆ ಭಾಸ್ಕರ್ ಅವರು ತಮ್ಮ ಫೋನ್ ನಂಬರ್ ನೀಡಿ ಇನ್ನು ಮುಂದೆ ಇಂತಹ ಸಮಸ್ಯೆಗಳು ಕಂಡುಬಂದಲ್ಲಿ ತಮ್ಮ ಗಮನಕ್ಕೆ ತರುವಂತೆ ತಿಳಿಸಿದ್ದಾರೆ.

ಈ ವೀಡಿಯೋವನ್ನು ಟ್ವಿಟ್ಟರ್ ಬಳಕೆದಾರೆ ಶ್ರೀಲಕ್ಷ್ಮಿ ಎಂಬವರು ಶೇರ್ ಮಾಡಿಕೊಂಡಿದ್ದು, ಇದೀಗ ಈ ವೀಡಿಯೋ ಸಾಕಷ್ಟು ವೈರಲ್ ಆಗುತ್ತಿದೆ. ಅಲ್ಲದೆ ಬಾಲಕನ ಮುಗ್ಧತೆಗೆ ನೆಟ್ಟಿಗರು ಮಾರು ಹೋಗಿದ್ದಾರೆ. ಇದನ್ನೂ ಓದಿ: ಮೇಕೆದಾಟು ಯೋಜನೆ- ರಾಜ್ಯ ಸರ್ಕಾರ ನಿರ್ಧಾರದ ವಿರುದ್ಧ ತ.ನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

Comments

Leave a Reply

Your email address will not be published. Required fields are marked *