ಕಾಂಗ್ರೆಸ್‌ ಕೂಡ ಜನರಲ್ಲಿ ಒಡಕು ಮೂಡಿಸುತ್ತಿದೆ: ಗುಲಾಂ ನಬಿ ಅಜಾದ್‌ ಆರೋಪ ತಳ್ಳಿ ಹಾಕಿದ ಖರ್ಗೆ

ನವದೆಹಲಿ: ಕಾಂಗ್ರೆಸ್‌ ಸೇರಿದಂತೆ ದೇಶದ ರಾಜಕೀಯ ಪಕ್ಷಗಳು ಜನರಲ್ಲಿ ಒಡಕು ಮೂಡಿಸುತ್ತಿವೆ ಎಂಬ ಕಾಂಗ್ರೆಸ್‌ ಹಿರಿಯ ನಾಯಕ ಗುಲಾಂ ನಬಿ ಅಜಾದ್‌ ಅವರ ಆರೋಪವನ್ನು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತಳ್ಳಿ ಹಾಕಿದ್ದಾರೆ.

ಭಾರತದಲ್ಲಿ ಯಾವುದೇ ರಾಜಕೀಯ ಪಕ್ಷಗಳು ಧರ್ಮ ಮತ್ತು ಜಾತಿ ರಾಜಕಾರಣ ಮಾಡಬಾರದು. ಧರ್ಮ ಅಥವಾ ಜಾತಿ ರಾಜಕಾರಣ ಮಾಡುವುದರಲ್ಲಿ ಕಾಂಗ್ರೆಸ್ ತೊಡಗಿಲ್ಲ. ಇದು ಅಜಾದ್ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಕೀಯ ಪಕ್ಷಗಳು ಜನರ ನಡುವೆ ಒಡಕು ಮೂಡಿಸುತ್ತಿವೆ: ಗುಲಾಂ ನಾಬಿ ಅಜಾದ್

ಪ್ರತಿಯೊಂದು ರಾಜಕೀಯ ಪಕ್ಷಗಳು ಜಾತಿ ಮತ್ತು ಧರ್ಮದ ಆಧಾರದ ಮೇಲೆ ಜನರು ಮತ್ತು ಸಮಾಜದಲ್ಲಿ ಒಡಕು ಮೂಡಿಸುತ್ತಿವೆ. ಕಾಂಗ್ರೆಸ್ ಪಕ್ಷವೂ ಇಂತಹ ರಾಜಕೀಯ ಮಾಡುತ್ತಿದೆ. ಹಾಗೆ ಮಾಡಬಾರದು ಎಂಬುದು ನನ್ನ ಸಲಹೆ ಎಂದು ಗುಲಾಂ ನಬಿ ಅಜಾದ್‌ ಹೇಳಿಕೆ ನೀಡಿದ್ದರು.

ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಭಾರತೀಯ ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದರು. ಇದನ್ನೂ ಓದಿ: ರಾಜ್ಯಸಭೆಗೆ ಕ್ರಿಕೆಟಿಗ ಹರ್ಭಜನ್ ಸಿಂಗ್ ನಾಮನಿರ್ದೇಶನ – ಅವಿರೋಧವಾಗಿ ಆಯ್ಕೆಯಾಗಲಿರುವ ಬಜ್ಜಿ

Comments

Leave a Reply

Your email address will not be published. Required fields are marked *