ಮೂರ್ಖರು, ಹುಚ್ಚರು, ಬುದ್ಧಿಇಲ್ಲದವರಿಗೆ ಉತ್ತರಿಸಬಾರದು – ಕೇಜ್ರಿವಾಲ್‍ಗೆ ಅಗ್ನಿಹೋತ್ರಿ ಪರೋಕ್ಷ ಟಾಂಗ್

ನವದೆಹಲಿ: ಕೆಲವು ಮೂರ್ಖರು, ಹುಚ್ಚರು, ಬುದ್ಧಿಇಲ್ಲದವರಿಂದ ತಪ್ಪಿಸಿಕೊಳ್ಳಬೇಕು, ಅವರಿಗೆ ಉತ್ತರಿಸಬಾರದು ಎಂದು ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ತಿರುಗೇಟು ನೀಡಿದ್ದಾರೆ.

ಇತ್ತೀಚೆಗಷ್ಟೇ ಅರವಿಂದ್ ಕೇಜ್ರಿವಾಲ್ ಅವರು ರಾಜ್ಯದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ತೆರಿಗೆ ಮುಕ್ತಗೊಳಿಸುವ ಬಗ್ಗೆ ನೀಡಿದ್ದ ಹೇಳಿಕೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಟ್ರೋಲ್ ಆಗುತ್ತಿದ್ದಾರೆ. ಇದೀಗ ಇದೇ ವಿಚಾರವಾಗಿ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕೂಡ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ : ಬೇಕಿದ್ರೆ ʻದಿ ಕಾಶ್ಮೀರ್‌ ಫೈಲ್ಸ್‌ʼನ್ನು ಯೂಟ್ಯೂಬ್‌ಗೆ ಹಾಕಲಿ: ತೆರಿಗೆ ವಿನಾಯಿತಿ ಕೇಳಿದ ಬಿಜೆಪಿಗೆ ಕೇಜ್ರಿವಾಲ್‌ ಟಾಂಗ್

ವಿವೇಕ್ ಅಗ್ನಿಹೋತ್ರಿ ಅವರು ಶುಕ್ರವಾರ ಭೋಪಾಲ್‍ನ ಮಖನ್‍ಲಾಲ್ ಚತುರ್ವೇದಿ ರಾಷ್ಟ್ರೀಯ ಪತ್ರಿಕೋದ್ಯಮ ಮತ್ತು ಸಂವಹನ ವಿಶ್ವವಿದ್ಯಾಲಯದಲ್ಲಿ ಚಿತ್ರ ಭಾರತಿ ಚಲನಚಿತ್ರೋತ್ಸವಕ್ಕೆ ಆಗಮಿಸಿದ್ದರು. ಈ ವೇಳೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅನೇಕ ಜನ ದೇವರು ಭೂಮಿಗೆ ಬರಬೇಕೆಂದು ಬಯಸುತ್ತಾರೆ. ಕೆಲವು ಮೂರ್ಖರು, ಹುಚ್ಚರು, ಬುದ್ಧಿಇಲ್ಲದವರು ಇರುತ್ತಾರೆ. ಈ ಮೂರು ವರ್ಗದ ಜನರಿಂದ ತಪ್ಪಿಸಿಕೊಳ್ಳಬೇಕು. ಅಂತವರಿಗೆ ಉತ್ತರಿಸಬಾರದು ಎಂದು ಟಾಂಗ್ ನೀಡಿದ್ದಾರೆ.

ಇತ್ತೀಚೆಗಷ್ಟೇ ದೆಹಲಿ ವಿಧಾನಸಭೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರು, ಬಿಜೆಪಿಯವರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಕೇಳುತ್ತಿದ್ದಾರೆ. ನಿರ್ದೇಶಕರು ಸಿನಿಮಾವನ್ನು ಯೂಟ್ಯೂಬ್‍ಗೆ ನೀಡಲಿ. ಉಚಿತವಾಗಿ ಸಿನಿಮಾ ನೋಡಬಹುದು ಎಂದಿದ್ದರು. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಲಾಭವನ್ನು ದಾನಮಾಡಿ ಎಂದ ಐಎಎಸ್ ಆಫೀಸರ್: ನಿರ್ದೇಶಕರ ಉತ್ತರವೇನು?

ನಮ್ಮನ್ನು ತೆರಿಗೆ ಮುಕ್ತ ಮಾಡಿ ಎಂದು ಏಕೆ ಕೇಳುತ್ತಿದ್ದೀರಿ? ಅಷ್ಟು ಉತ್ಸುಕರಾಗಿದ್ದರೆ ವಿವೇಕ್ ಅಗ್ನಿಹೋತ್ರಿಯವರಿಗೆ ಯೂಟ್ಯೂಬ್‍ನಲ್ಲಿ ಹಾಕಲು ಹೇಳಿ, ಎಲ್ಲಾ ಉಚಿತವಾಗಿರುತ್ತದೆ. ಎಲ್ಲರೂ ಅದನ್ನು ಒಂದು ದಿನದಲ್ಲಿ ನೋಡಬಹುದು. ಆಗ ತೆರಿಗೆ ಮುಕ್ತ ಮಾಡುವ ಅಗತ್ಯವಾದರೂ ಏಕೆ ಬರುತ್ತದೆ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದರು.

Comments

Leave a Reply

Your email address will not be published. Required fields are marked *