ಕರ್ನಾಟಕ ಚಿತ್ರಕಲಾ ಪರಿಷತ್ತಿಗೆ ಡೀಮ್ಡ್ ವಿವಿ ಮಾನ್ಯತೆ: ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್‍ಗೆ ಡೀಮ್ಡ್ ವಿಶ್ವವಿದ್ಯಾಲಯ ಮಾನ್ಯತೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಚಿತ್ರಕಲಾ ಪರಿಷತ್ ಆಯೋಜಿಸಿದ್ದ 19ನೇ ಚಿತ್ರಸಂತೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ಕಲಾ ವಿದ್ಯಾರ್ಥಿಗಳಿಗೆ ಅನುಕೂಲ ಆಗಲು ಕರ್ನಾಟಕ ಚಿತ್ರ ಕಲಾಪರಿಷತ್‍ಗೆ ಡೀಮ್ಡ್ ವಿಶ್ವವಿದ್ಯಾಲಯ ಮಾನ್ಯತೆ ನೀಡಲಾಗುತ್ತದೆ. ಇದಕ್ಕಾಗಿ ವಿಶೇಷ ಕಾಯ್ದೆ ತಂದು ಮುಂದಿನ ಅಧಿವೇಶನದಲ್ಲಿ ಪಾಸ್ ಮಾಡಿಕೊಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು. ಇದನ್ನೂ ಓದಿ: ತರಬೇತಿ ನಿರತ ಐಆರ್‌ಬಿ ಪೊಲೀಸ್ ಹೃದಯಾಘಾತದಿಂದ ಸಾವು

ಇದಲ್ಲದೆ ರಾಜ್ಯದ 6 ಪ್ರಾದೇಶಿಕ ಜಿಲ್ಲೆಗಳಲ್ಲಿ ಚಿತ್ರ ಕಲಾ ಗ್ಯಾಲರಿ ಸ್ಥಾಪನೆ ಮಾಡಲು ಸರ್ಕಾರ ಮುಂದಾಗಿದೆ ಎಂದು ಸ್ವತಃ ಬೊಮ್ಮಾಯಿ ಅವರು ಈ ಘೋಷಣೆ ಮಾಡಿದರು. ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮ ಸರ್ಕಾರದ ಉದ್ದೇಶ. ಕಲೆಗೆ ಬೆಲೆ ಕೊಡುವ ಕೆಲಸ ಸರ್ಕಾರ ಮಾಡುತ್ತದೆ. ಹೀಗಾಗಿ ರಾಜ್ಯದ 6 ಪ್ರಾದೇಶಿಕ ಜಿಲ್ಲೆಗಳಲ್ಲಿ ಚಿತ್ರ ಕಲಾ ಗ್ಯಾಲರಿ ಪ್ರಾರಂಭ ಮಾಡಲಾಗುತ್ತದೆ ಎಂದು ತಿಳಿಸಿದರು. ಅಷ್ಟೇ ಅಲ್ಲದೆ ಪ್ರತಿ ಜಿಲ್ಲೆಗಳಲ್ಲಿ ಕಲೆಯನ್ನು ಪ್ರಚಾರಪಡಿಸುವ ಕೆಲಸಕ್ಕೂ ಸರ್ಕಾರ ಸಹಕಾರ ನೀಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ದಿಗ್ವಿಜಯ್ ಸಿಂಗ್ ಸಹಿತ 6 ಮಂದಿಗೆ 1 ವರ್ಷ ಜೈಲು ಶಿಕ್ಷೆ

ಚಿತ್ರಸಂತೆ ಉದ್ಘಾಟನೆ ಮಾಡಿದ ಮುಖ್ಯಮಂತ್ರಿಗಳು ಚಿತ್ರಸಂತೆಯ ವೀಕ್ಷಣೆ ಮಾಡಿದರು. ಕಲಾವಿದರ ಕಲಾ ಕೃತಿಗೆ ಮನಸೋತರು. ಚಿತ್ರಸಂತೆ ವೀಕ್ಷಣೆ ವೇಳೆ ಐಸ್ ಕ್ರೀಂ ಹುಡುಗನಿಂದ ಜಾಯ್ ಐಸ್ ಕ್ರೀಂ ಕ್ಯಾಂಡಿ ಖದೀರಿ ಮಾಡಿ ಸವಿದರು.

Comments

Leave a Reply

Your email address will not be published. Required fields are marked *