ನವದೆಹಲಿ: ಒಬ್ಬ ಮುಸಲ್ಮಾನ ಭಾರತದ ಪ್ರಧಾನಿಯಾದರೆ ಶೇಕಡಾ 50 ರಷ್ಟು ಹಿಂದೂಗಳು ಮತಾಂತರಗೊಳ್ಳುತ್ತಾರೆ, ಶೇಕಡಾ 40 ರಷ್ಟು ಜನರನ್ನು ಕೊಲ್ಲಲಾಗುತ್ತದೆ ಮತ್ತು ಶೇಕಡಾ 10ರಷ್ಟು ಜನ ದೇಶಭ್ರಷ್ಟರಾಗುತ್ತಾರೆ ಎಂದು ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ್ ಹೇಳಿದ್ದಾರೆ.

ಭಾನುವಾರ ದೆಹಲಿಯಲ್ಲಿ ನಡೆದ ಹಿಂದೂ ಮಹಾಪಂಚಾಯತ್ ಅನ್ನು ಉದ್ದೇಶಿಸಿ ಮಾತನಾಡಿವ ವೇಳೆ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಇದೀಗ ಯತಿ ನರಸಿಂಗಾನಂದ್ ಅವರ ವಿರುದ್ಧ ದೆಹಲಿ ಪೊಲೀಸರು ಸೆಕ್ಷನ್ 153ಂರ ಅಡಿಯಲ್ಲಿ [ಧರ್ಮ, ಜನಾಂಗ, ಜನ್ಮ ಸ್ಥಳ, ನಿವಾಸ, ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು] ಮತ್ತು ಸೆಕ್ಷನ್ 188ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಮೈಕ್ ತೆಗೆಸದಿದ್ದರೆ, ನಾವೂ ಬೆಳಗ್ಗೆ 5ಕ್ಕೆ ಮಂದಿರಗಳಲ್ಲಿ ಈಶ್ವರನ ಭಜನೆ, ಓಂಕಾರ ಹಾಕಿಸುತ್ತೇವೆ: ಮುತಾಲಿಕ್
ಇದಕ್ಕೂ ಮುನ್ನ 2021ರ ಡಿಸೆಂಬರ್‌ನಲ್ಲಿ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್‍ನಲ್ಲಿ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಯತಿ ನರಸಿಂಹಾನಂದ ಅವರನ್ನು ಬಂಧಿಸಲಾಯಿತು. ನಂತರ ಅವರಿಗೆ ಜಾಮೀನು ನೀಡಲಾಯಿತು. ಇದನ್ನೂ ಓದಿ: ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧ: ವಕ್ಫ್ ಮಂಡಳಿಯ ಸುತ್ತೋಲೆಯಲ್ಲಿ ಏನಿದೆ? ಸುಪ್ರೀಂ ಕೋರ್ಟ್ ಹೇಳಿದ್ದೇನು?

Leave a Reply