ಸುಳ್ಳು ಸುದ್ದಿ ಹಬ್ಬಿಸುವ ಆನ್‍ಲೈನ್ ಚಾನೆಲ್‍ಗಳಿಗೆ ಅನುರಾಗ್ ಠಾಕೂರ್ ವಾರ್ನಿಂಗ್

ನವದೆಹಲಿ: ಸುಳ್ಳು ಸುದ್ದಿಗಳನ್ನು ವರದಿ ಮಾಡುವ ಯೂಟ್ಯೂಬ್ ಚಾನೆಲ್‍ಗಳು, ಟ್ವಿಟ್ಟರ್ ಖಾತೆಗಳು ಮತ್ತು ಫೇಸ್‍ಬುಕ್ ಖಾತೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರವು 22 ಯೂಟ್ಯೂಬ್ ಚಾನೆಲ್‍ಗಳನ್ನು ನಿರ್ಬಂಧಿಸಿದ್ದು, ಅದರಲ್ಲಿ 18 ಯೂಟ್ಯೂಬ್ ಚಾನೆಲ್‍ಗಳು ಭಾರತದಲ್ಲಿ ಕಾರ್ಯನಿರ್ವಹಿಸುತ್ತಿತ್ತು ಮತ್ತು 4 ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ನಾವು ಈ ಹಿಂದೆಯೂ ಸುಳ್ಳು ಸುದ್ದಿಗಳನ್ನು ವರದಿ ಮಾಡುತ್ತಿದ್ದಂತಹ ಅನೇಕ ಚಾನಲ್‍ಗಳನ್ನು ನಿರ್ಬಂಧಿಸಿದ್ದೇವೆ. ಒಟ್ಟಾರೆ ಇಲ್ಲಿಯವರೆಗೂ 78 ಯೂಟ್ಯೂಬ್ ಚಾನೆಲ್‍ಗಳನ್ನು ನಿರ್ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸತತ 15ನೇ ದಿನ ಏರಿಕೆ – ಪೆಟ್ರೋಲ್, ಡೀಸೆಲ್ 80 ಪೈಸೆ ಏರಿಕೆ

ಈ ಚಾನೆಲ್‍ಗಳು ಸುಳ್ಳು ಸುದ್ದಿಗಳನ್ನು ಹರಡುವುದರಿಂದ ಇದು ಭಾರತದ ಸಾರ್ವಭೌಮತ್ವ, ರಾಷ್ಟ್ರೀಯ ಭದ್ರತೆ ಮತ್ತು ಇತರ ದೇಶಗಳೊಂದಿಗಿನ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೇ ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ನಕಲಿ ಸುದ್ದಿಗಳನ್ನು ಹರಡುತ್ತಿದ್ದಾರೆ. ಹೀಗಾಗಿ ಇಂತಹ ಚಾನೆಲ್‍ಗಳ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಸರ್ಕಾರ ಎಂದಿಗೂ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಐಟಿ ನಿಯಮಗಳು, 2021ರ ಅಡಿಯಲ್ಲಿ ತುರ್ತು ಅಧಿಕಾರವನ್ನು ಬಳಸಿಕೊಂಡು, ಭಾರತದ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದಕ್ಕಾಗಿ 22 ಯೂಟ್ಯೂಬ್ ಆಧಾರಿತ ಸುದ್ದಿ ಚಾನೆಲ್‍ಗಳು, ಮೂರು ಟ್ವಿಟರ್ ಖಾತೆಗಳು, ಒಂದು ಫೇಸ್‍ಬುಕ್ ಖಾತೆ ಮತ್ತು ಒಂದು ಸುದ್ದಿ ವೆಬ್‍ಸೈಟ್ ಅನ್ನು ನಿರ್ಬಂಧಿಸಲು ಆದೇಶಗಳನ್ನು ಹೊರಡಿಸಿದೆ. ಇದನ್ನೂ ಓದಿ: ಇ-ಹರಾಜು ಮೂಲಕ ಸಾರಿಗೆಯೇತರ ವಾಹನಗಳಿಗೆ ‘ವಿಐಪಿ ಸಂಖ್ಯೆ’: ಹರಿಯಾಣ ಸಿಎಂ

Comments

Leave a Reply

Your email address will not be published. Required fields are marked *