ಮನೆಗಳ್ಳತನ- ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಮೊಬೈಲ್ ವಶ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಉಪ ವಿಭಾಗದ ಪೊಲೀಸರು ಮಿಂಚಿನ ಕಾರ್ಯಚರಣೆ ನಡೆಸಿ ವಿವಿಧ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇತ್ತೀಚೆಗೆ ನೆಲಮಂಗಲ ಟೌನ್ ವ್ಯಾಪ್ತಿಯಲ್ಲಿ ನಡೆದ ಮನೆಕಳ್ಳತನದಲ್ಲಿ 334 ಗ್ರಾಂ ಚಿನ್ನಾಭರಣ ಸೇರಿದಂತೆ 12,55000 ರೂ. ಮೌಲ್ಯದ ಕಳವು ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇತ್ತ ದಾಬಸ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನರ ದಿಕ್ಕು ತಪ್ಪಿಸಿ ಕಳ್ಳತನ ಮಾಡುತ್ತಿದ್ದ ಆರೋಪಿಗಳು ವಶಕ್ಕೆ ಪಡೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ನಿಲ್ಲಿಸಿ ರಸ್ತೆ ಬದಿಯ ಹೋಟೆಲ್‍ಗಳಲ್ಲಿ ಊಟಕ್ಕೆ ತೆರಳಿದ ವೇಳೆ ಲ್ಯಾಪ್‍ಟಾಪ್, ಮೊಬೈಲ್‍ನ್ನು ಕಳವು ಮಾಡುತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ 12,50,000 ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಬೇಲೂರು ಗಳಿಗೆ ತೇರಿನ ದಿನ ಕುರಾನ್ ಪಠಣೆ ನಮ್ಮ ಕೈಪಿಡಿಯಲ್ಲೇ ಇದೆ: ಸಿಇಒ ವಿದ್ಯುಲ್ಲತಾ

ತ್ಯಾಮಗೊಂಡ್ಲು ನೆಲಮಂಗಲ ಗ್ರಾಮಾಂತರ ಪೊಲೀಸರು ಪ್ರಕರಣವನ್ನು ಭೇದಿಸಿದ್ದು, ಒಟ್ಟು 26,55,000 ರೂ. ಮೌಲ್ಯದ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗ್ರಾಮಾಂತರ ಎಸ್ಪಿ ಕೋನವಂಶಿ ಕೃಷ್ಣ ಪ್ರಶಂಸೆ ವ್ಯಕ್ತಪಡಿಸಿದರು. ಇದನ್ನೂ ಓದಿ: ತಿರುಪತಿ ದೇಗುಲದಲ್ಲಿ ಕಾಲ್ತುಳಿತ – ವೆಂಕಟೇಶ್ವರನ ದರ್ಶನಕ್ಕೆ ಭಕ್ತಾದಿಗಳ ನೂಕುನುಗ್ಗಲು

ಈ ವೇಳೆ ಡಿವೈಎಸ್‍ಪಿ ಗೌತಮ್, ಸಿಪಿಐ ಕುಮಾರ್, ರಾಜೀವ್, ಶಿವಕುಮಾರ್, ಪಿಎಸ್‍ಐ ಸುರೇಶ್, ಮುರುಳಿ, ಚಿಕ್ಕನರಸಿಂಹಯ್ಯ ಸಿಬ್ಬಂದಿ ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *