IPL ಬೆಟ್ಟಿಂಗ್ ದಾಳಿ ವೇಳೆ ಪೊಲೀಸರಿಗೆ ಹೆದರಿ ಓಡುವಾಗ ಬಿದ್ದು ವ್ಯಕ್ತಿ ಸಾವು

ರಾಯಚೂರು: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಐಪಿಎಲ್ ಬೆಟ್ಟಿಂಗ್ ಜೋರಾಗಿ ನಡೆಯುತ್ತಿದೆ. ಈ ಮಾಹಿತಿ ಮೇರೆಗೆ ರಾಯಚೂರು ತಾಲೂಕಿನ ಯರಗೇರಾ ಠಾಣೆ ಪೊಲೀಸರು ವಡವಟ್ಟಿ ಗ್ರಾಮದಲ್ಲಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಇದೇ ವೇಳೆ ಪೊಲೀಸರು ಎಲ್ಲಿ ಬಂಧಿಸುತ್ತಾರೋ ಎಂದು ಹೆದರಿ ಓಡುವಾಗ ಕಾಲುಜಾರಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ವಾಮಿ(35) ಮೃತ ವ್ಯಕ್ತಿಯಾಗಿದ್ದು, ಇವರು ಆಟೋ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದರು ಪೊಲೀಸರ ದಾಳಿಗೆ ಹೆದರಿ ಓಡಿ ಹೋಗಲು ಯತ್ನಿಸಿದಾಗ ಬಿದ್ದು ಸಾವನ್ನಪ್ಪಿದ್ದಾರೆ ಅಂತ ಆತನ ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ ಐಪಿಎಲ್ ಬೆಟ್ಟಿಂಗ್ ಹಾಗೂ ವ್ಯಕ್ತಿ ಸಾವಿನ ಬಗ್ಗೆ ಪ್ರತ್ಯೇಕ ಎರಡು ಪ್ರಕರಣಗಳು ಯರಗೇರಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇದನ್ನೂ ಓದಿ:  ಈಶ್ವರಪ್ಪರನ್ನು ಸಮರ್ಥಿಸಿಕೊಂಡ ಸಿ.ಟಿ ರವಿ, ಗೋಪಾಲಯ್ಯ

ವ್ಯಕ್ತಿ ಸಾವು ಅಸಹಜ ಸಾವು ಅಂತ ಪ್ರಕರಣ ದಾಖಲಾಗಿದ್ದು, ಐಪಿಎಲ್ ಬೆಟ್ಟಿಂಗ್ ದಾಳಿಗೂ ವ್ಯಕ್ತಿ ಸಾವಿಗೂ ಸಂಬಂಧವಿಲ್ಲ. ಎರಡು ಪ್ರತ್ಯೇಕ ಘಟನೆಗಳು ಮೃತನ ಕುಟುಂಬಸ್ಥರು ಸುಮ್ಮನೆ ಆರೋಪ ಮಾಡುತ್ತಿದ್ದಾರೆ ಅಂತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗರ್ಭಿಣಿ ಮಹಿಳೆಯ ಮೊದಲ ಕೆಲಸದ ರಹಸ್ಯ ಬಿಚ್ಚಿಟ್ಟ ನಟಿ ಪ್ರಣಿತಾ

Comments

Leave a Reply

Your email address will not be published. Required fields are marked *