ಎಸಿ ಸ್ಫೋಟ – ಓರ್ವ ಸಾವು, ಐವರಿಗೆ ಗಾಯ

ನವದೆಹಲಿ: ಹವಾನಿಯಂತ್ರಣ(ಎಸಿ)ದ ಕಂಪ್ರೆಸರ್ ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಆಗ್ನೇಯ ದೆಹಲಿಯ ಜಾಮಿಯಾ ನಗರದಲ್ಲಿನ ಉಪಾಹಾರ ಗೃಹವೊಂದರಲ್ಲಿ ನಡೆದಿದೆ.

ಎರಡು ಅಂತಸ್ತಿನ ಕಟ್ಟಡದ ನೆಲ ಅಂತಸ್ತಿನಲ್ಲಿರುವ ಉಪಾಹಾರ ಗೃಹದಲ್ಲಿ ಎಸಿಯನ್ನು ಸರಿಪಡಿಸಲು ನದೀಮ್ ಮತ್ತು ಶಾನ್ ಅವರನ್ನು ಕರೆಸಲಾಗಿತ್ತು. ಈ ವೇಳೆ ಎಸಿ ಸ್ಫೋಟಗೊಂಡಿದ್ದು, ನದೀಮ್ ಅವರ ತಲೆ ಮತ್ತು ಎದೆಯ ಮೇಲೆ ತೀವ್ರವಾಗಿ ಗಾಯವಾಗಿ ರಕ್ತಸ್ರಾವದಿಂದ ಪ್ರಜ್ಞೆ ತಪ್ಪಿದ್ದರು. ನಂತರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ರಷ್ಯಾದಿಂದ ಬಂತು ಎಸ್ 400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆ

ಉಳಿದಂತೆ ಶಾನ್, ಡ್ಯಾನಿಶ್, ಅಜ್ಜು, ಬಿಜಯ್ ಮತ್ತು ಇಕ್ರಾ ಅವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹೋಲಿ ಫ್ಯಾಮಿಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ಗಂಟೆಗಳ ಬಳಿಕ ಇಕ್ರಾ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

POLICE JEEP

ಘಟನೆ ಕುರಿತಂಯತೆ ಪ್ರಾಥಮಿಕ ತನಿಖೆ ವೇಳೆ ಮೊದಲಿಗೆ ಅಗ್ನಿಶಾಮಕ ದಳ ಇಲಾಖೆ ಉಪಾಹಾರ ಗೃಹದಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ 13 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಿದ್ದರು. ಆದರೆ ನಂತರ ಎಸಿ ಕಂಪ್ರೆಸರ್ ಆಗಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರಿಗೆ ತಿಳಿದುಬಂದಿದೆ. ಇದನ್ನೂ ಓದಿ: ಏನಿದು ಎಸ್-400 ಟ್ರಯಂಫ್? ಹೇಗೆ ಕೆಲಸ ಮಾಡುತ್ತೆ? ಅಮೆರಿಕ, ಚೀನಾ, ಪಾಕಿಸ್ತಾನಕ್ಕೆ ಆತಂಕ ಯಾಕೆ?

Comments

Leave a Reply

Your email address will not be published. Required fields are marked *