ಭಾರತದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ?

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯನ್ನು ಭಾರತದಲ್ಲಿ ನಿಷೇಧಿಸಲು ಚಿಂತನೆ ನಡೆದಿದೆ. ಕೇಂದ್ರ ಗೃಹ ಇಲಾಖೆ ಈ ಬಗ್ಗೆ ತಯಾರಿ ಆರಂಭಿಸಿದ್ದು, ಮುಂದಿನ ಒಂದು ವಾರದಲ್ಲಿ ಸಂಘಟನೆ ನಿಷೇಧವಾಗುವ ಸಾಧ್ಯತೆಗಳು ದಟ್ಟವಾಗಿದೆ ಎಂದು ಮೂಲಗಳು ಹೇಳಿವೆ.

ಹಲವು ದೂರುಗಳ ಹಿನ್ನೆಲೆ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಪಿಎಫ್‌ಐ ದೇಶದಲ್ಲಿ ಶಾಂತಿ ಕದಡುವುದು, ವೈಷಮ್ಯ ಭಿತ್ತುವುದು, ಭಯೋತ್ಪಾದನೆಗೆ ಬೆಂಬಲ ಹಾಗೂ ಕೋಮು ಪ್ರಚೋದನೆ ನೀಡುವ ಗಂಭೀರ ಆರೋಪಗಳನ್ನು ಎದುರಿಸುತ್ತಿದೆ. ಇದನ್ನೂ ಓದಿ: ಪ್ರಧಾನಿ ಭೇಟಿ ಮಾಡಿ ಸಂಭ್ರಮಿಸಿದ ಗ್ರ್ಯಾಮಿ ಅವಾರ್ಡ್ ವಿಜೇತ ರಿಕಿ ಕ್ರೇಜ್

ಈ ಸಂಬಂಧ ಅಜಯ್ ಭಲ್ಲಾ ವರದಿ ಪಡೆಯುತ್ತಿದ್ದಾರೆ. ರಾಷ್ಟ್ರೀಯ ತನಿಖಾ ದಳದಿಂದಲೂ ಮಾಹಿತಿ ಕೋರಲಾಗಿದೆ. ಕೇರಳದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಪ್ರೇರಣೆ ಹಾಗೂ ಬೆಂಗಳೂರಿನಲ್ಲಿ ಹಲವು ಗಲಭೆಗಳ ಹಿಂದೆ ಪಿಐಎಫ್ ಪಾತ್ರ ಇರುವ ಬಗ್ಗೆ ರಾಜ್ಯ ಸರ್ಕಾರಗಳಿಂದ ಗೃಹ ಇಲಾಖೆ ಮಾಹಿತಿ ತರಿಸಿಕೊಂಡಿದೆ.

ಈ ಎಲ್ಲ ವರದಿಗಳನ್ನು ಆಧರಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಭಾರತದಲ್ಲಿ ಬ್ಯಾನ್ ಮಾಡಲು ತಯಾರಿ ನಡೆಯುತ್ತಿದೆ. ಈವರೆಗೂ ಭಾರತದಲ್ಲಿ ಭಯೋತ್ಪಾದನೆ ಚಟುವಟಿಕೆಗಳಿಗೆ ಪ್ರೇರಣೆ ನೀಡುವ 42 ಮತ್ತು ನಿಯಮಗಳನ್ನು ಉಲ್ಲಂಘಿಸಿ ಕಾನೂನು ಸುವ್ಯವಸ್ಥಿತೆ ಹದಗೆಡಿಸುವ 11 ಸಂಘಟನೆಗಳನ್ನು ಗೃಹ ಇಲಾಖೆ ನಿಷೇಧಿಸಿದೆ‌. ಇದನ್ನೂ ಓದಿ: RSS ಆಸ್ಪತ್ರೆ ಹಿಂದೂಗಳಿಗೆ ಮಾತ್ರವೇ ಎಂಬ ರತನ್ ಟಾಟಾ ಪ್ರಶ್ನೆಗೆ ಗಡ್ಕರಿ ಉತ್ತರ ಹೀಗಿತ್ತು

Comments

Leave a Reply

Your email address will not be published. Required fields are marked *