8 ವರ್ಷದ ಮಗನನ್ನೇ ಕತ್ತು ಸೀಳಿ ಕೊಂದ ಕ್ರೂರಿ ತಾಯಿ

crime

ಜೈಪುರ: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳು ತನ್ನ ಎಂಟು ವರ್ಷದ ಮಗನ ಕತ್ತನ್ನು ಚಾಕುವಿನಿಂದ ಸೀಳಿ ಹತ್ಯೆಗೈದಿರುವ ಘಟನೆ ರಾಜಸ್ಥಾನದ ಜಲಾವರ್ ಜಿಲ್ಲೆಯ ಸುನೆಲ್ ಪಟ್ಟಣದಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಆರೋಪಿಯನ್ನು 32 ವರ್ಷದ ಮಮತಾ ಗುರ್ಜರ್ ಎಂದು ಗುರುತಿಸಲಾಗಿದ್ದು, ಪತಿಯಿಂದ ಪ್ರತ್ಯೇಕವಾಗಿ ಕಳೆದ ಆರು ವರ್ಷಗಳಿಂದ ತನ್ನ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದರು ಮತ್ತು ಮೃತ ಬಾಲಕನನ್ನು ವಿಜಯ್ ಕುಮಾರ್ ಗುರ್ಜರ್ ಎಂದು ಗುರುತಿಸಲಾಗಿದೆ.

ಶನಿವಾರ ರಾತ್ರಿ ತಂದೆ ಮತ್ತು ಸಹೋದರ ಮನೆಯ ಒಳಗಡೆ ಮಲಗಿದ್ದಾಗ, ಹೊರಗೆ ಜಗುಲಿಯ ಮೇಲೆ ಮಲಗಿದ್ದ ಬಾಲಕನನ್ನು ಕೋಣೆಯೊಂದಕ್ಕೆ ಕರೆದೊಯ್ದು ಚಾಕುವಿನಿಂದ ಕತ್ತು ಸೀಳಿ ಪರಾರಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಲಿಫ್ಟ್ ನೀಡುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ – ಕೆಲವೇ ಗಂಟೆಗಳಲ್ಲಿ ಆರೋಪಿ ಅರೆಸ್ಟ್

POLICE JEEP

ಭಾನುವಾರ ಬೆಳಗ್ಗೆ ಮಹಿಳೆಯ ತಂದೆ ಮತ್ತು ಸಹೋದರ ನಿದ್ದೆಯಿಂದ ಎಚ್ಚರಗೊಂಡಾಗ ಬಾಲಕ ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿರುವುದನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಬಾಲಕನ ತಾಯಿಯ ಚಿಕ್ಕಪ್ಪ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿ ಮಮತಾ ಗುರ್ಜಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ ಮತ್ತು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಇದನ್ನೂ ಓದಿ: ಸಿನಿಮೀಯ ರೀತಿ ದರೋಡೆಕೋರನನ್ನೇ ಹಿಡಿದ ಮನೆಯವರು

ಮರಣೋತ್ತರ ಪರೀಕ್ಷೆ ಬಳಿಕ ಭಾನುವಾರ ಬೆಳಗ್ಗೆ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ಬಾಲಕನ ತಾಯಿಯನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *