ಬಿಜೆಪಿಯನ್ನು ಬೈದು ಕಾಂಗ್ರೆಸ್ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವುದು ಮೂರ್ಖತನ: ಬಿಸಿ ಪಾಟೀಲ್

ಚಿಕ್ಕಬಳ್ಳಾಪುರ: ಬಿಜೆಪಿಯನ್ನು ಬೈದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಕಂಡರೆ ಅದು ಮೂರ್ಖತನದ ಪರಮಾವಧಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಕಿಡಿಕಾರಿದರು.

ರೈತರಿಗೊಂದು ದಿನ ಕಾರ್ಯಕ್ರಮದ ಅಂಗವಾಗಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಸುಮ್ಮನೆ ಬಿಜೆಪಿಯನ್ನು ಬೈಕೊಂಡು ಹೋಗುವುದೆ ಕಾಂಗ್ರೆಸ್‍ನವರು ಕೆಲಸ ಎಂದುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಈ ವರ್ಷದಿಂದಲೇ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಬಿಸಿ ನಾಗೇಶ್

ಸುಮ್ಮನೆ ಕಾಂಗ್ರೆಸ್‍ನವರು ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ನಮಗೆ ಅಭಿವೃದ್ಧಿ ಮಾಡುವ ಕೆಲಸ ಇದೆ. ಆದರೆ ಅವರಿಗೇನಿದೆ. ಕಾಂಗ್ರೆಸ್‍ನವರು ಜಾತಿ, ಧರ್ಮದ ಬಗ್ಗೆ ಚರ್ಚೆ ಮಾಡ್ತಾರೆ ಎಂದ ಅವರು, ಬಿಜೆಪಿಯವರು ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಾಟೆಗೆ ಕಾಂಗ್ರೆಸ್‍ನವರೇ ಕಾರಣ: ಬಿಎಸ್‍ವೈ

Comments

Leave a Reply

Your email address will not be published. Required fields are marked *