ದ್ವೇಷದ ಬುಲ್ಡೋಜರ್‌ಗಳನ್ನು ಆಫ್ ಮಾಡಿ: ರಾಹುಲ್ ಗಾಂಧಿ

RAHUL GANDHI

ನವದೆಹಲಿ: ದ್ವೇಷದ ಬುಲ್ಡೋಜರ್‌ಗಳನ್ನು ಆಫ್ ಮಾಡಿ ವಿದ್ಯುತ್ ಸ್ಥಾವರಗಳನ್ನು ಆನ್ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದರು.

ದೆಹಲಿ ಮತ್ತು ಮಧ್ಯಪ್ರದೇಶದ ಹಿಂಸಾಚಾರ ನಡೆದ ಪ್ರದೇಶಗಳಲ್ಲಿ ಬುಲ್ಡೋಜರ್‌ಗಳ ಬಳಸಿ ತೆರವುಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್ ಮಾಡಿ ಕಿಡಿಕಾರಿದರು.

Narendra Modi

ಟ್ವೀಟ್‍ನಲ್ಲಿ ಏನಿದೆ?: ಎಂಟು ವರ್ಷಗಳ ಚರ್ಚೆಯ ಪರಿಣಾಮವಾಗಿ ಭಾರತದಲ್ಲಿ ಕೇವಲ 8 ದಿನಗಳ ಕಲ್ಲಿದ್ದಲು ದಾಸ್ತಾನು ಇದೆ. ಮೋದಿಜೀ ಅವರೇ ಈ ವಿಷಯ ದಿಗ್ಭ್ರಮೆ ಉಂಟಾಗುತ್ತಿದೆ. ವಿದ್ಯುತ್ ವ್ಯತ್ಯಯದಿಂದಾಗಿ ಸಣ್ಣ ಕೈಗಾರಿಕೆಗಳ ಮೇಲೆ ಅಗಾಧವಾಗಿ ಪರಿಣಾಮ ಬೀರುತ್ತಿದೆ. ಇದರ ಜೊತೆಗೆ ಅವರು ಹೆಚ್ಚು ನಷ್ಟವನ್ನು ಅನುಭವಿಸಬೇಕಾದ ಪರಿಸ್ಥಿತಿಯೂ ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದ್ವೇಷದ ಬುಲ್ಡೋಜರ್‌ಗಳನ್ನು ಆಫ್ ಮಾಡಿ ಮತ್ತು ವಿದ್ಯುತ್ ಸ್ಥಾವರಗಳನ್ನು ಆನ್ ಮಾಡಿ ಎಂದು ಅವರು, ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ದಾಸ್ತಾನು ಕಡಿಮೆಯಾಗಿರುವ ವರದಿಯನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಬುಲ್ಡೋಜರ್‌ ಕಾರ್ಯಾಚರಣೆಗೆ ಸುಪ್ರೀಂ ಬ್ರೇಕ್‌

ಭಾರತದಲ್ಲಿ ಕೇವಲ 8 ದಿನಗಳ ಕಲ್ಲಿದ್ದಲು ದಾಸ್ತಾನು ಉಳಿದಿದೆ. ಬಿಜೆಪಿಯ ದ್ವೇಷದ ರಾಜಕೀಯದಿಂದಾಗಿ ಬೀದಿಗಳಲ್ಲಿ ಉರಿಯುತ್ತಿರುವ ಬೆಂಕಿಯು ಮನೆಗಳನ್ನು ಬೆಳಗಿಸುವುದಿಲ್ಲ ಎಂದು ಕಾಂಗ್ರೆಸ್  ಹಂಚಿಕೊಂಡಿದೆ. ಇದನ್ನೂ ಓದಿ: ದೆಹಲಿಯಲ್ಲಿ ಜೆಸಿಬಿ ಘರ್ಜನೆ- ಜಹಾಂಗೀರ್‌ಪುರಿಯಲ್ಲಿ ಅಕ್ರಮ ಆಸ್ತಿಗಳ ಧ್ವಂಸ

Comments

Leave a Reply

Your email address will not be published. Required fields are marked *