ದೆಹಲಿಯಲ್ಲಿ ಒಬ್ಬನಿಂದ ಇಬ್ಬರಿಗೆ ಸೋಂಕು: ಐಐಟಿ ಮದ್ರಾಸ್

ನವದೆಹಲಿ: ದೆಹಲಿಯಲ್ಲಿ ಕೊರೊನಾ ನಾಲ್ಕನೇ ಅಲೆ ಕಾಡಲಾರಂಭಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಒಬ್ಬ ಸೋಂಕಿತ ವ್ಯಕ್ತಿಯಿಂದ ಇಬ್ಬರಿಗೆ ಕೊರೊನಾ ಹರಡುತ್ತಿದೆ ಎಂಬ ಅಂಶ ಐಐಟಿ ಮದ್ರಾಸ್‍ನ ವರದಿಯೊಂದರಲ್ಲಿ ತಿಳಿಸಿದೆ.

ವರದಿ ಪ್ರಕಾರ ದೆಹಲಿಯಲ್ಲಿ ಕೊರೊನಾ ನಾಲ್ಕನೇ ಅಲೆ ಆರಂಭವಾಗಿದೆ. ಇಲ್ಲಿ ಒಬ್ಬ ಸೋಂಕಿತನಿಂದ ಇಬ್ಬರಿಗೆ ಸೋಂಕು ಹರಡುತ್ತಿದೆ ಎಂಬುದು ಸಂಶೋಧನೆಯಿಂದ ತಿಳಿದುಬಂದಿದೆ. ಐಐಟಿ-ಮದ್ರಾಸ್‍ನ ಗಣಿತಶಾಸ್ತ್ರ ವಿಭಾಗ ಮತ್ತು ಕಂಪ್ಯೂಟೇಶನಲ್ ಗಣಿತ ಮತ್ತು ದತ್ತಾಂಶ ವಿಜ್ಞಾನ ಕೇಂದ್ರದ ಪ್ರೊ.ನೀಲೇಶ್ ಎಸ್ ಉಪಾಧ್ಯೆಯ ಮತ್ತು ಪ್ರೊ.ಎಸ್ ಸುಂದರ್ ಅವರ ನೇತೃತ್ವದಲ್ಲಿ ನಡೆದ ಸರ್ವೇಯಲ್ಲಿ ಈ ಅಂಶ ಪತ್ತೆಯಾಗಿದೆ. ಇದನ್ನೂ ಓದಿ: ಹೊಸ ಆತಂಕ ಹುಟ್ಟಿಸಿದ ಓಮಿಕ್ರಾನ್ BA.2.12 ತಳಿ

ಈಗಾಗಲೇ ದೇಶದ ವಿವಿಧ ನಗರಗಳಲ್ಲಿ ಓಮಿಕ್ರಾನ್ ಉಪತಳಿಗಳಾದ ಬಿಎ.2 ಮತ್ತು ಬಿಎ.2.12 ತಳಿ ಪತ್ತೆಯಾಗಿದೆ. ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾ ನಗರಗಳಲ್ಲಿ ಈ ತಳಿ ಪತ್ತೆಯಾದರೂ ಕೂಡ ದೆಹಲಿಯಷ್ಟು ತೀವ್ರ ಪ್ರಮಾಣದಲ್ಲಿ ಸೋಂಕು ಹರಡುತ್ತಿಲ್ಲ. ದೆಹಲಿಯಲ್ಲಿ 1,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿದ್ದು, ಪಾಸಿಟಿವಿಟಿ ರೇಟ್ 4.64ಕ್ಕೆ ಏರಿಕೆ ಕಂಡಿದೆ. ಕೆಲ ಸೋಂಕಿತರಲ್ಲಿ ಬಿಎ.2.12 ಲಕ್ಷಣಗಳು ಪತ್ತೆಯಾಗಿದೆ. ಇದನ್ನೂ ಓದಿ: 15% ಜನರಿಗಾಗಿ 85% ನಾಗರಿಕರ ಮೂಲಭೂತ ಹಕ್ಕು ಉಲ್ಲಂಘನೆ – ಹಲಾಲ್ ಉತ್ಪನ್ನ ನಿಷೇಧಿಸುವಂತೆ ಸುಪ್ರೀಂನಲ್ಲಿ ಅರ್ಜಿ

ದೇಶದಲ್ಲಿ ಈ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು ನಿತ್ಯ ಸಾವಿರಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಕೊರೊನಾ ಸೋಂಕು ಹೆಚ್ಚಿದ ಹಿನ್ನೆಲೆ ಪಂಜಾಬ್, ಹರಿಯಾಣ, ದೆಹಲಿ, ಚೆನ್ನೈ ಸೇರಿದಂತೆ ಹಲವು ರಾಜ್ಯಗಳು ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂಬ ಆದೇಶ ಹೊರಡಿಸಿವೆ. ಇದಲ್ಲದೆ ಮಾಸ್ಕ್ ಧರಿಸದಿದ್ದರೆ ದಂಡ ಪ್ರಯೋಗಿಸಲು ಅಲ್ಲಿನ ಸರ್ಕಾರಗಳು ನಿರ್ಧರಿಸಿವೆ.

Comments

Leave a Reply

Your email address will not be published. Required fields are marked *