ಮಡಿಕೇರಿ: ಮದುವೆಯಾಗಿ ಒಂದೇ ವರ್ಷದಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬೇಳೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಅನುಪಮಾ(20) ಮೃತ ದುರ್ದೈವಿ. ಕಳೆದ ಒಂದೂವರೆ ವರ್ಷದ ಹಿಂದೆ ನಿತೇಶ್‍ನನ್ನು ಪ್ರೀತಿಸಿ ಮನೆಯವರ ವಿರೋಧದ ನಡುವೆಯೂ ಮದುವೆಯಾಗಿದ್ರು. ಆದರೆ ಮದುವೆಯಾಗಿ ಒಂದು ತಿಂಗಳಿನಲ್ಲೇ ಅನುಪಮಾ ಅವರನ್ನು ಗಂಡನ ಮನೆಯವರು ಕೆಲಸಕ್ಕೆ ಕಳುಹಿಸಿದ್ದಾರೆ. ಗಂಡನ ಮನೆಯವರು ಸರಿಯಾದ ರೀತಿಯಲ್ಲಿ ನೋಡಿಕೊಳ್ಳದೇ ದಿನನಿತ್ಯ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಯುವತಿಯ ಪೋಷಕರು, ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಹಾಡಹಗಲೇ ಅತ್ಯಾಚಾರ – ‘ಕಾಲಿಗೆ ಬೀಳುತ್ತೇನೆ ನನ್ನನ್ನು ಬಿಟ್ಟು ಬಿಡಿ’ ಎಂದ್ರೂ ಬಿಡದ ಪಾಪಿಗಳು

ನಡೆದಿದ್ದೇನು?
ಅನುಪಮಾ ಏಪ್ರಿಲ್ 27 ರಂದು ಮಧ್ಯಾಹ್ನ 12.30 ಗಂಟೆಗೆ ಕೊಟ್ಟಿಗೇರಿ ನಿತೇಶ್ ಸಂಬಂಧಿ ದಿನೇಶ್ ಅವರ ಮನೆಗೆ ಹೋದ ಸಂದರ್ಭದಲ್ಲಿ ನಿತ್ರಾಣಗೊಂಡಿದ್ದಾಳೆ. ಈ ಹಿನ್ನೆಲೆ ಅವರು ಕೂಡಲೇ ಬಾಳಲೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಅನುಪಮಾ ಮೃತಪಟ್ಟಿದ್ದಳು. ಇದನ್ನು ನಿತೇಶ್ ತಿಳಿಸಿದ್ದು, ಮೃತ ಶರೀರವನ್ನು ನೋಡಿದ ಸಂದರ್ಭದಲ್ಲಿ ಅನುಪಮಾ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ ಎಂಬ ಸಂಶಯ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆ ಮೃತಪಟ್ಟ ಅನುಪಮಾ ಸಾವಿನ ಬಗ್ಗೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಪೋಷಕರು ಒತ್ತಾಯಿಸಿದ್ದಾರೆ.

ಗಂಡನ ಮನೆಯವರು ಹೇಳಿದ್ದೇನು?
ಅನುಪಮಾ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಳು. ಅದಕ್ಕೆ ನಮ್ಮ ಕುಟುಂಬದ ಸದಸ್ಯರು ಆಕೆಯನ್ನು ಸರ್ಕಾರಿ ಅಸ್ಪತ್ರೆಗೆ ಕರೆದುಕೊಂಡು ಹೋಗಿ ಆರೋಗ್ಯ ತಪಾಸಣೆ ಮಾಡಿಸಿದ್ದೆವು. ಆದರೆ ಅದು ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ ಎಂದು ಇತ್ತ ಗಂಡನ ಮನೆಯರು ಹೇಳುತ್ತಿದ್ದಾರೆ.
ಪ್ರಸ್ತುತ ಪೊನ್ನಂಪೇಟೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆಯ ವರದಿಗೆ ಕಾಯುತ್ತಿದ್ದಾರೆ. ಇದನ್ನೂ ಓದಿ: ‘ಕಾತುವಕುಲಾ ರೆಂಡು ಕಾದಲ್’ ರಿಲೀಸ್: ತಿರುಪತಿ ಆಶೀರ್ವಾದ ಪಡೆದ ನಯನತಾರಾ, ವಿಘ್ನೇಶ್ ಶಿವನ್

Leave a Reply