ದೆಹಲಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ

BASAVARAJ BOMMAI

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಿದ್ದಾರೆ.

ದೆಹಲಿಗೆ ಹೋಗುವ ಮೊದಲು ಸಿಎಂ ಮನೆಗೆ ಕೋಟಾ ಶ್ರೀನಿವಾಸ ಪೂಜಾರಿ, ಅರವಿಂದ್ ಬೆಲ್ಲದ್, ಹರತಾಳು ಹಾಲಪ್ಪ ಮೊದಲಾದವರು ಆಗಮಿಸಿದರು. ಕೆಲ ಕಾಲ ಸಿಎಂ ಜೊತೆ ಚರ್ಚೆ ಮಾಡಿ ನಾಯಕರು ಆರ್‌ ಟಿನಗರ ನಿವಾಸದಿಂದ ತೆರಳಿದ್ದಾರೆ.

ಇತ್ತ ಸಿಎಂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತಮ್ಮ ಆರ್ ಟಿನಗರ ನಿವಾಸದಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿದರು. ಸಿಎಂ ಅವರು ಜಾಗತಿಕ ಬಂಡವಾಳ ಹೂಡಿಕೆದಾರ ರಾಷ್ಟ್ರಗಳ ರಾಯಭಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದಾರೆ. ಇದನ್ನೂ ಓದಿ: ವಂಶಾಡಳಿತ ರಾಜಕಾರಣಕ್ಕೆ ಬಿಜೆಪಿಯಲ್ಲಿ ಸ್ಥಾನವಿಲ್ಲ: ಜ್ಯೋತಿರಾದಿತ್ಯ ಸಿಂಧಿಯಾ

ಇಂದು ರಾತ್ರಿ ದೆಹಲಿಯಲ್ಲೇ ವಾಸ್ತವ್ಯ ಹೂಡಲಿರುವ ಅವರು, ನಾಳೆ ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಸಾಧ್ಯವಾದ್ರೆ ದೆಹಲಿಯಲ್ಲಿ ಕೇಂದ್ರ ನಾಯಕರನ್ನ ಭೇಟಿ ಮಾಡಲಿದ್ದಾರೆ.

 

Comments

Leave a Reply

Your email address will not be published. Required fields are marked *